Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಾರಾಹಿ ಯೋಜನೆ – ಯಾರಿಗೂ ಅನ್ಯಾಯ ಆಗಲು ಬಿಡಲ್ಲ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ
    ಉಡುಪಿ ಜಿಲ್ಲೆ

    ವಾರಾಹಿ ಯೋಜನೆ – ಯಾರಿಗೂ ಅನ್ಯಾಯ ಆಗಲು ಬಿಡಲ್ಲ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ

    Updated:30/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Click Here

    Call us

    Click Here

    ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.

    ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್‌ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಲಾಗಿದೆ. ಇದು ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

    ವರಾಹಿ ಯೋಜನೆ: ಯಾರಿಗೂ ಅನ್ಯಾಯ ಆಗಲು ಬಿಡಲ್ಲ:
    ವರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು. 

    ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಇನ್ನು ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    19 + 16 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.