Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಡುಗು, ಸಿಡಿಲು ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸಲಹೆ ಸೂಚನೆ
    ಉಡುಪಿ ಜಿಲ್ಲೆ

    ಗುಡುಗು, ಸಿಡಿಲು ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸಲಹೆ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು/ ಸನ್ನದ್ಧತೆಗಾಗಿ, ಸಾರ್ವಜನಿಕ ಮತ್ತು ಜಾನುವಾರು ಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಸೂಚನೆಗಳನ್ನು ನೀಡಿದೆ.

    Click Here

    Call us

    Click Here

    ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಬೇಕು.

    ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ, ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು.

    ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು.

    ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಅಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.

    Click here

    Click here

    Click here

    Click Here

    Call us

    Call us

    ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುವುದು ಸೂಕ್ತವಲ್ಲ. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು.

    ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಗಾಳಿಯಲ್ಲಿ ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕೊಂಬೆ/ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳಿದ್ದಲ್ಲಿ ತೆಗೆದುಹಾಕಬೇಕು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು. ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.

    ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು.

    ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ, ವಾಹನದ ಒಳಗೆ ಇರಬೇಕು.

    ಮಿಂಚಿನ ಹೊಡೆತದಿಂದಾಗಿ ಅರಣ್ಯ ಪ್ರದೇಶದಲ್ಲಿ ಕಾಡ್ಲಿಚ್ಚು ಸಂಭವಿಸುವ ಸಾಧ್ಯತೆ ಇರುತ್ತದೆ ಈ ಪ್ರದೇಶದಿಂದ ದೂರವಿರಬೇಕು ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು.

    ತುರ್ತು ಸೇವೆಗಳಿಗೆ ಟೋಲ್ ಫ್ರೀ ನಂಬರ್ 1077 ಅಥವಾ ದೂ. ಸಂಖ್ಯೆ : 0820- 2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    six − two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.