ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಅಬಕಾರಿ ಇಲಾಖೆಯ ಮಂಗಳೂರು ವಿಭಾಗದ ಜಂಟಿ ಆಯುಕ್ತ ಎ.ಎನ್ ನಾಗೇಶ್ ದಂಪತಿಗಳು ಗುರುವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಪ್ರಸಾದ ನೀಡಿ ಗೌರವಿಸಿದರು. ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಭುಜಂಗ ಗುರಿಕಾರ, ಅರ್ಚಕ ಪ್ರತಿನಿಧಿ ಅರವಿಂದ ಜೋಗಿ, ರಾಘವೇಂದ್ರ ಜೋಗಿ, ವಿಜಯ ಜೋಗಿ ಉಪಸ್ಥಿತರಿದ್ದರು.










