Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಕ್ಷಣ ಹಾಗೂ ಸಾಂಸ್ಕೃತಿಕ ತಜ್ಞ ಡಾ. ಎಂ. ಮೋಹನ ಆಳ್ವರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್
    alvas nudisiri

    ಶಿಕ್ಷಣ ಹಾಗೂ ಸಾಂಸ್ಕೃತಿಕ ತಜ್ಞ ಡಾ. ಎಂ. ಮೋಹನ ಆಳ್ವರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್

    Updated:04/04/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ, ಬೆಂಗಳೂರಿನ ನಗರ ವಿಶ್ವವಿದ್ಯಾಲಯ (ಡಾ. ಮನಮೋಹನ್‌ಸಿಂಗ್ ವಿಶ್ವವಿದ್ಯಾಲಯ) ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.

    Click Here

    Call us

    Click Here

    ಏಪ್ರಿಲ್ 04ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ ನೇರವೇರಲಿದೆ.

    ಡಾ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸಿದ ಪ್ರಮುಖರಲ್ಲಿ ಅಗ್ರ ಗಣ್ಯರು.

    ಮೂಡುಬಿದಿರೆ ಕೇಂದ್ರವಾಗಿ ಕಾರ್ಯನಿರ್ವಹಿಸುವ ಆಳ್ವಾಸ್ ಸಂಸ್ಥೆಗಳ ಮೂಲಕ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ನೂರಾರು ಕೋರ್ಸ್ಗಳನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ್ದಾರೆ. ಅವರ ನೇತೃತ್ವದಲ್ಲಿ ಶಿಕ್ಷಣ ಮಾತ್ರವಲ್ಲದೆ ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಮಾನ ಮಹತ್ವ ನೀಡಲಾಗಿದೆ.

    “ಆಳ್ವಾಸ್ ನುಡಿಸಿರಿ ವಿರಾಸತ್” ಮೊದಲಾದ ಮಹತ್ವದ ಸಾಹಿತ್ಯಿಕ- ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರ ಶ್ಲಾಘನೀಯ. ಅವರ ಸಾಧನೆಯನ್ನು ಗುರುತಿಸಿ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳು ಬಂದಿದ್ದು, 2010ರಲ್ಲಿ ಮಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಇತ್ತೀಚೆಗೆ ಉತ್ತರ ಪ್ರದೇಶದ ವಾರಾಣಸಿಯ ಬನಾರಸ್ ಹಿಂದೂ ವಿವಿಯಲ್ಲಿ  ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ 29ನೇ ಪದವಿ ಪ್ರದಾನ ಸಮಾರಂಭದಲ್ಲಿ ಡಾ. ಎಮ್. ಮೋಹನ್ ಆಳ್ವರಿಗೆ “ಫೆಲೋ ಆಫ್ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ’’ ಎಂಬ ಪ್ರತಿಷ್ಠಿತ ಗೌರವ ಫೆಲೋಶಿಪ್ ನೀಡಿ ಗೌರವಿಸಲಾಗಿತ್ತು.

    Click here

    Click here

    Click here

    Click Here

    Call us

    Call us

    ಈ ಎಲ್ಲಾ ಸಾಧನೆಗಳು ಮತ್ತು ದೀರ್ಘಕಾಲದ ಸಮರ್ಪಿತ ಸೇವೆಯನ್ನು ಪರಿಗಣಿಸಿ, ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಅವರ ಕಾರ್ಯಶೈಲಿ ಮತ್ತು ದೃಷ್ಟಿಕೋನವು ಭವಿಷ್ಯದ ಶಿಕ್ಷಣ ವ್ಯವಸ್ಥೆಗೆ ಮಾದರಿಯಾಗಿದ್ದು, ಅನೇಕ ಶಿಕ್ಷಣ ತಜ್ಞರಿಗೆ ಪ್ರೇರಣೆಯಾಗುತ್ತಿದೆ.
    ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ಸ್ ಸಿಸ್ಟ್ಮ್ಸ್ನ ಮಹಾನಿರ್ದೇಶಕ ಡಾ. ಬಿನಯಕುಮಾರ್ ದಾಸ್, ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ ಹಾಗೂ ಡಾ. ಮನಮೋಹನ್‌ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವ ರಮೇಶ್ ಬಿ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    1 × 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.