ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಸ್ತುತ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ನಮ್ಮ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ ಅವರು ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಸರ್ವರನ್ನು ಸ್ವಾಗತಿಸಿದರು.ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸಂಗೀತ ಶಿಕ್ಷಕಿ ರಮಣಿಯವರು ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕ ಪದ್ಮನಾಭ ಅಡಿಗ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕ ಮಾಧವ ಅವರು ಧನ್ಯವಾದ ಸಮರ್ಪಣೆಗೈದರು.










