ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲು, ಕಳೆದ ಸಾಲಿನ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿಯಲ್ಲಿ ಶೇ. 60 ರಷ್ಟು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪೋಷಕರ ವರಮಾನ ವಾರ್ಷಿಕ 2 ಲಕ್ಷ ರೂ. ಮೀರಿರದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ.4 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.










