Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸ್ತುತ ಬೇಸಿಗೆಯ ಹಿನ್ನೆಲೆ, ಬಿಸಿಲಿನ ಪ್ರಖರತೆ ದಿನೇ ದಿನೇ ಹೆಚ್ಚುತ್ತಿದ್ದು, ಶಾಖದ ಹೊಡೆತದಿಂದ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹೊರಡಿಸಲಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತೀ ಹೆಚ್ಚು ತಾಪಮಾನದದಿಂದ ಮಾನವನ ಮೇಲೆ ಸಾಮಾನ್ಯವಾಗಿ ನಿರ್ಜಲೀಖರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು ಶಾಖದ ಆಘಾತದಂತಹ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಈ ಬಗ್ಗೆ ರಕ್ಷಣೆ ಪಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಪೋಸ್ಟರ್, ಬ್ಯಾನರ್, ಜಿಂಗಲ್ಸ್ ಗಳ ಮೂಲಕ ಮಾಹಿತಿ ನೀಡುವುದರೊಂದಿಗೆ, ಅರಿವು ಮೂಡಿಸಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿಸಿದ ಅನಾರೋಗ್ಯವನ್ನು ತಡೆಗಟ್ಟಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓ.ಆರ್.ಎಸ್ ಸೇರಿದಂತೆ ಇತರೆ ಔಷಧಿಗಳನ್ನು ಹೆಚ್ಚಾಗಿ ದಾಸ್ತಾನು ಇರಿಸಿಕೊಂಡಿರಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮಾರುಕಟ್ಟೆ, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು. 

    ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಕುಡಿಯುವ ನೀರಿನ ಕೊರತೆ ಎದುರಾಗಬಹುದಾದ ವಾರ್ಡ್ ಹಾಗೂ ಗ್ರಾಮಗಳಲ್ಲಿ, ಬೋರ್‌ವೆಲ್‌ಗಳನ್ನು ಗುರುತಿಸಿ ಅವುಗಳ ಮೂಲಕ ಹಾಗೂ ಟ್ಯಾಂಕರ್‌ಗಳ ಮೂಲಕ ನೀರು ಒದಗಿಸಲು ಕ್ರಮ ವಹಿಸಬೇಕು ಎಂದ ಅವರು, ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಅಗತ್ಯ ಕ್ರಮವಹಿಸಬೇಕು. ಆಗಿಂದಾಗ್ಗೆ ಕುಡಿಯುವ ನೀರಿನ ಪರೀಕ್ಷೆಗಳನ್ನು ಸಹ ಕಡ್ಡಾಯವಾಗಿ ಮಾಡಿಸಬೇಕು ಎಂದರು.

    ಬೇಸಿಗೆ ದಿನಗಳಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುವ ಕಡೆಗಳಲ್ಲಿ ಅವಶ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದ ಅವರು, ಪ್ರಸ್ತುತ ಜಿಲ್ಲೆಯಲ್ಲಿ ದನಕಾರುಗಳಿಗೆ ಮೇವಿನ ಕೊರತೆ ಕಂಡು ಬಂದಿಲ್ಲ. ಎಲ್ಲಾ ತಾಲೂಕುಗಳಲ್ಲಿ ಮುಂದಿನ 39 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನಿರುವುದಾಗಿ ತಿಳಿಸಿದರು. 

    Click here

    Click here

    Click here

    Click Here

    Call us

    Call us

    ಬೇಸಿಗೆ ದಿನಗಳಲ್ಲಿ ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚು ಇರುತ್ತವೆ. ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಿಂದಾಗ್ಗೆ ತಪಾಸಣೆ ಕೈಗೊಳ್ಳಬೇಕು. ಅಗ್ನಿ ಅನಾಹುತಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದ ಅವರು, ಕಳೆದ ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗಳನ್ನು ನಡೆಸಿ, ವರದಿ ನೀಡುವಂತೆ ತಿಳಿಸಿದ್ದರೂ ಸಹ ಇದುವರೆಗೂ ಆಡಿಟ್ ಅನ್ನು ಪೂರ್ತಿಯಾಗಿ ನಡೆಸಿ ವರದಿ ನೀಡದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೆ ಅಗ್ನಿ ಸುರಕ್ಷತಾ ಆಡಿಟ್‌ಗಳನ್ನು ನಡೆಸಿ ವರದಿ ನೀಡುವಂತೆ ಅಗ್ನಿ ಶಾಮಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ನಿರಂತರವಾಗಿ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ತೈಲ ಸೋರಿಕೆ ಪ್ರಕರಣಗಳಾದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯ ಸದಸ್ಯರುಗಳು ತುರ್ತು ಸಂದರ್ಭವನ್ನು ಎದುರಿಸುವ ಕ್ರಿಯಾ ಯೋಜನೆಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೋಳ್ಳಿ, ಸಹಾಯಕ ಕಮಿಷನರ್ ರಶ್ಮಿ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    five + three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.