ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸಂಘ ಸಂಸ್ಥೆಗಳು ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸಬೇಕು. ಪರಿಸರದ ಎಲ್ಲಾ ಚಟುವಟಿಕೆಗಳಲ್ಲಿ ಕೈಜೋಡಿಸಿ ಗ್ರಾಮದ ಅಭಿವೃದ್ಧಿಗೆ ಸಹಾಯ ಮಾಡಬೇಕು. ಸಮಾಜದಲ್ಲಿ ಅತ್ಯುತ್ತಮ ಸೇವೆ ಮಾಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.
ಅವರು ಗಂಗೊಳ್ಳಿ ಲೈಟ್‌ಹೌಸ್ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಜರಗಿದ ಗಂಗೊಳ್ಳಿ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ವಿದ್ಯುತ್ ಗುತ್ತಿಗೆದಾರ ಕೆ.ಆರ್. ನಾಯ್ಕ್, ಶ್ರೀ ನಾರಾಯಣಗುರು ಜನ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಪೂಜಾರಿ, ಪಂಚಗಂಗಾವಳಿ ಬಳಗ ಗಂಗೊಳ್ಳಿ ಇದರ ಅಧ್ಯಕ್ಷ ರೋಶನ್ ಖಾರ್ವಿ, ಗುತ್ತಿಗೆದಾರ ಜಯಂತ್ ಶೇರುಗಾರ್, ಗಂಗೊಳ್ಳಿ ಗ್ರಾಪಂ ಸದಸ್ಯ ಮಹೇಶ್ (ಅಯ್ಯಪ್ಪ), ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಯೂತ್ ಕ್ಲಬ್ ಅಧ್ಯಕ್ಷ ಕೆ.ಚಂದ್ರ ಖಾರ್ವಿ ಗೌರವಾಧ್ಯಕ್ಷ ಮಡಿ ಮಾಧವ ಖಾರ್ವಿ, ಶ್ರೀ ಜಟ್ಟಿಗೇಶ್ವರ ಮಹಿಳಾ ಮಂಡಳಿ ಅಧ್ಯಕ್ಷೆ ಜಯಂತಿ ಜಿ.ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭ ಸಾಧಕರಾದ ಮಡಿ ಹರೀಶ್ ಖಾರ್ವಿ, ಮಾಧವ ಖಾರ್ವಿ (ಎಸ್‌ಐ), ಮಡಿ ನಾಗರಾಜ ಖಾರ್ವಿ, ವೆಂಕಟೇಶ ಕೋಟಾನ್, ಮಡಿ ಸಂತೋಷ ಖಾರ್ವಿ ಮತ್ತು ಮಡಿ ರಾಘವೇಂದ್ರ ಖಾರ್ವಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕೋಶಾಧಿಕಾರಿ ಬಿ.ನಾಗರಾಜ ಖಾರ್ವಿ ಸ್ವಾಗತಿಸಿದರು. ಜಿ.ಕೇಶವ ಖಾರ್ವಿ ವರದಿ ವಾಚಿಸಿದರು. ಮಡಿ ರೇಖಾ ಖಾರ್ವಿ ಮತ್ತು ನಿಶಾ ಖಾರ್ವಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಮಡಿ ವಿಶ್ವನಾಥ ಖಾರ್ವಿ ವಂದಿಸಿದರು.
















