ಕುಂದಾಪ್ರ ಡಾಂ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾಪುರ ತಾಲೂಕಿನ ಇಡೂರು ಕುಂಜ್ಞಾಡಿ ಗ್ರಾಮದ ಹೊಸಿಮನೆ ನಿವಾಸಿ ಕಾರ್ತಿಕ್ ಆಚಾರ್ ಎಂಬುವನ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿರುತ್ತಾರೆ.
ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. ಈತನನ್ನು ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.










