Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೀವನದಲ್ಲಿ ಲವಲವಿಕೆ, ಸಮಯಪ್ರಜ್ಞೆ ಮುಖ್ಯ: ಡಾ. ಎಂ. ಮೋಹನ ಆಳ್ವ
    alvas nudisiri

    ಜೀವನದಲ್ಲಿ ಲವಲವಿಕೆ, ಸಮಯಪ್ರಜ್ಞೆ ಮುಖ್ಯ: ಡಾ. ಎಂ. ಮೋಹನ ಆಳ್ವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರ ಮೇಳದ ಉದ್ಘಾಟನೆ ಭಾನುವಾರ ಕನ್ನಡ ಭವನದಲ್ಲಿ ಜರುಗಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, ಜೀವನದಲ್ಲಿ ಲವಲವಿಕೆ ಮತ್ತು ಸಮಯಪ್ರಜ್ಞೆ ಅತ್ಯಂತ ಮುಖ್ಯವೆಂದು ತಿಳಿಸಿದರು. ಡಾ. ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ನಡೆಯುತ್ತಿರುವ ಈ ರೀತಿಯ ಶಿಬಿರಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ಬಹಳ ಉಪಯೋಗಕಾರಿಯಾಗಿವೆ ಎಂದು ಹೇಳಿದರು.

    ತಮ್ಮ ಬಾಲ್ಯದ ಅನುಭವವನ್ನು ಹಂಚಿಕೊಂಡ ಅವರು, “ನಾನು ಚಿಕ್ಕವನಾಗಿದ್ದಾಗ ನನ್ನ ತಂದೆ-ತಾಯಿಗೆ ಇಂತಹ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಇರಲಿಲ್ಲ. ನಾಲ್ಕನೇ ತರಗತಿಯಿಂದಲೇ ಹಾಸ್ಟೆಲ್ ಜೀವನ ಆರಂಭಿಸಿ ಸ್ವತಂತ್ರವಾಗಿ ಬೆಳೆಯುವ ಅವಕಾಶ ನನಗೆ ದೊರಕಿತು. ಸಾಂಸ್ಕೃತಿಕ ವೇದಿಕೆಗಳ ಮೂಲಕ ಫಿಲಿಫೈನ್ಸ್, ಜಪಾನ್, ಇಂಗ್ಲೆಂಡ್ ಸೇರಿದಂತೆ ಹಲವು ದೇಶಗಳಿಗೆ ತೆರಳಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಆದರೆ ನನ್ನ ತಂದೆ-ತಾಯಂದಿರು ನನ್ನ ಕಾರ್ಯಕ್ರಮಗಳನ್ನು ನೋಡುವ ಅವಕಾಶ ಪಡೆದಿರಲಿಲ್ಲ. ಇಂದಿನ ಪೋಷಕರು ಮಕ್ಕಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುತ್ತಿರುವುದು ಸಂತೋಷದ ಸಂಗತಿ,” ಎಂದು ಹೇಳಿದರು.

    ಕ್ಲಾಸ್‌ರೂಮ್ ಶಿಕ್ಷಣದ ಜೊತೆಗೆ ಬಯಲು ಶಾಲೆಯ ಕಲಿಕೆ ಜೀವನದಲ್ಲಿ ಬಹಳ ಮುಖ್ಯವೆಂದು ಅವರು ಅಭಿಪ್ರಾಯಪಟ್ಟರು. “ನನಗೆ ಈಗ 75 ವರ್ಷವಾದರೂ ನಾನು ಇನ್ನೂ ಬಯಲು ಶಾಲೆಯ ವಿದ್ಯಾರ್ಥಿಯೇ ಆಗಿದ್ದೇನೆ. ನಮ್ಮ ಕಾಲದಲ್ಲಿ ಕೂಡು ಕುಟುಂಬಗಳಿದ್ದವು; ಈಗ ಅವು ಕಡಿಮೆಯಾಗಿವೆ. ಇಂತಹ ಶಿಬಿರಗಳ ಮೂಲಕ ಕೂಡು ಕುಟುಂಬದ ಮಹತ್ವ ಮಕ್ಕಳಿಗೆ ತಿಳಿಯುತ್ತದೆ,” ಎಂದರು.

    ಮಕ್ಕಳಿಗೆ ಇಂತಹ ಶಿಬಿರಗಳಲ್ಲಿ ಹಾಡು, ನೃತ್ಯ, ಮಾತುಕತೆ ಸೇರಿದಂತೆ ವಿವಿಧ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶ ದೊರೆಯುತ್ತದೆ. ಇದು ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ಪ್ರತಿಯೊಬ್ಬರ ಜೀವನದಲ್ಲಿ ಅಭಿನಯವೂ ಪ್ರಮುಖ ಪಾತ್ರ ವಹಿಸುತ್ತದೆ. ದೇವರು ನೀಡಿದ ಕಣ್ಣು, ಕಿವಿ, ಬಾಯಿ ಮುಂತಾದ ಅಂಗಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

    Click here

    Click here

    Click here

    Click Here

    Call us

    Call us

    ಸಿ. ಎ. ಉಮೇಶ್ ರಾವ್ ಮಿಜಾರ್ ಅವರು ಮಾತನಾಡಿ, ಜೀವನದಲ್ಲಿ ಅಂಕಗಳು ಮಾತ್ರ ಮುಖ್ಯವಲ್ಲ; ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯೂ ಅಷ್ಟೇ ಅಗತ್ಯ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಜೀವನ್ ರಾಂ ಸುಳ್ಯ ಅವರು ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    13 − 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.