ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸಮಾಜದ ಋಣ ತಿರಿಸಲು ಜೈ ಕುಂದಾಪ್ರ ಎಂಬ ಸಂಘಟನೆಗಳು ರಕ್ತದಾನದಂತಹ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿವೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು.
ಅವರು ಭಾನುವಾರ ಕೋಟದಲ್ಲಿ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ದಶಮಾನೋತ್ಸವ ಕಾರ್ಯಕ್ರಮ ʼಜೈ ಕುಂದಾಪ್ರ ಸಂಭ್ರಮ-2026’ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಸದಾ ಸ್ಪಂದಿಸುವ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕಿದೆ,ದಶಮಾನೋತ್ಸವಕ್ಕೆ ಅರ್ಥಗರ್ಭಿತವಾಗಿ ಕಾರ್ಯಕ್ರಮ ಆಯೋಜಿಸಿ ಪಂಚವರ್ಣದಂತಹ ಸಂಘಟನೆಗಳನ್ನು ಗುರುತಿಸುವ ಕಾಯಕ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು.
ಇದೇ ವೇಳೆ ಕೋಟದ ಪಂಚವರ್ಣ ಸಂಘಟನೆಗೆ ಜೈ ಕುಂದಾಪ್ರ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಧಾರ್ಮಿಕ ಕ್ಷೇತ್ರದ ಭಾಸ್ಕರ ಸ್ವಾಮೀ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಅಶಕ್ತರಿಗೆ ನೆರವು,ವಿ ಲ್ ಚೇರ್ ಹಸ್ತಾಂತರ, ಪ್ರತಿಭಾ ಪುರಸ್ಕಾರ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ಜರಗಿದವು. ಸಭಾಧ್ಯಕ್ಷತೆಯನ್ನು ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಗೋವಿಂದಬಾಬು ಪೂಜಾರಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಬೆಂಗಳೂರಿನ ಉದ್ಯಮಿಗಳಾದ ಪ್ರಕಾಶ್ ಶೆಟ್ಟಿ, ಸತೀಶ್ ಶೆಟ್ಟಿ, ಜೈರಾಮ್ ಕುಲಾಲ್ ಜನ್ನಾಡಿ, ಪ್ರಕಾಶ್ ಸಿ. ಶೆಟ್ಟಿ, ಜೈ ಕುಂದಾಪ್ರ ಸೇವಾ ಟ್ರಸ್ಟ್ ನ ಆದಿತ್ಯ ಕೋಟ, ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿಯ ಪ್ರದಾನಕಾರ್ಯದರ್ಶಿ ಕೋಟ ದಿನೇಶ್ ಗಾಣಿಗ, ಕೋಟ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಾಂಡು ಪೂಜಾರಿ, ನ್ಯಾಯವಾದಿ ನೀಲ್ ಫೆರೆರಾ, ಕಾಂಗ್ರೆಸ್ ಯುವ ಮುಖಂಡ ಅಜಿತ್ ಶೆಟ್ಟಿ, ಕೃಷಿಕರಾದ ಅವಿನಾಶ್ ಬಳ್ಮನೆ, ವಿದ್ಯುತ್ ಗುತ್ತಿಗೆದಾರ ಕೆ.ಆರ್ ನಾಯಕ್, ವಿಕ್ಕಿಮೊಬೈಲ್ಸ್ ಮಾಲಿಕ ವಿವೇಕ್ ಸುವರ್ಣ, ಪ್ರಮುಖರಾದ ಪುಂಡಲಿಕ ಮೊಗವೀರ, ಜಯರಾಜ್ ಸಾಲಿಯಾನ್ ಉಪಸ್ಥಿತರಿದ್ದರು. ಮಂಜುನಾಥ್ ಹಿಲಿಯಾಣ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ, ತ್ರಿನೇತ್ರ ಕಲಾವಿದರು ಕುಡ್ಲ ಇವರಿಂದ ನಾಟಕ ಬ್ರಹ್ಮ ರಕ್ಕಸೆ ಪ್ರದರ್ಶನಗೊಂಡಿತು.
















