Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರಮಟ್ಟದ ತಯಾರಿ ಈಗ ನಿಮ್ಮ ಊರಲ್ಲೇ – ಮದರ್‌ ತೆರೆಸಾ ಪಿಯು ಕಾಲೇಜಿನಲ್ಲಿ Vedantu ತಂತ್ರಜ್ಞಾನ ಸಹಭಾಗಿತ್ವ JEE, NEET, KCET, ALL INDIA TEST SERIES
    ಊರ್ಮನೆ ಸಮಾಚಾರ

    ರಾಷ್ಟ್ರಮಟ್ಟದ ತಯಾರಿ ಈಗ ನಿಮ್ಮ ಊರಲ್ಲೇ – ಮದರ್‌ ತೆರೆಸಾ ಪಿಯು ಕಾಲೇಜಿನಲ್ಲಿ Vedantu ತಂತ್ರಜ್ಞಾನ ಸಹಭಾಗಿತ್ವ JEE, NEET, KCET, ALL INDIA TEST SERIES

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಇಲ್ಲಿನ ಮದರ್ ತೆರೆಸಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೊಸ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿ, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಯಾದ Vedantu ಜೊತೆಗಿನ ಸಹಯೋಗ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.

    Click Here

    Call us

    Click Here

    ಈ ಕಾರ್ಯಕ್ರಮವನ್ನು ಜೆಇಇ, ಸಿಇಟಿ ತರಬೇತುದಾರರಾದ ನಾಗರಾಜು ಕೆ.ಜಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪಪ್ರಾಂಶುಪಾಲರು ಉಪಸ್ಥಿತರಿದ್ದರು.

    ಈ ಹೊಸ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಕಾಲೇಜಿನ ದೈನಂದಿನ ಪಠ್ಯಕ್ರಮ, ಸ್ಪರ್ಧಾತ್ಮಕ ತರಗತಿಗಳ ಜೊತೆಗೆ ಅದಕ್ಕೆ ಪೂರಕವಾಗಿ ಪ್ರವೇಶ ಪರೀಕ್ಷೆಗಳಿಗಾಗಿ ಹೆಚ್ಚುವರಿ ಮಾರ್ಗದರ್ಶನ, ಅಭ್ಯಾಸ ಮತ್ತು ದಿನದ 24 ಗಂಟೆಯೂ ಸಂದೇಹ ನಿವಾರಣೆಯ ಸೌಲಭ್ಯ ದೊರೆಯುತ್ತದೆ. ಜೊತೆಗೆ ರಾಷ್ಟ್ರಮಟ್ಟದ ಮಾದರಿ ಪರೀಕ್ಷೆಗಳ ಮೂಲಕ ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳೊಂದಿಗೆ ಸ್ಫರ್ಧಿಸುವ ಅವಕಾಶ ಸಿಗುವುದರಿಂದ ವಿದ್ಯಾರ್ಥಿಗಳು ತಮ್ಮ ಮಟ್ಟವನ್ನು ತಿಳಿದುಕೊಂಡು , ಅಂತಿಮ ಪರೀಕ್ಷೆಗೆ ಮುನ್ನವೇ ರಾಷ್ಟ್ರಮಟ್ಟದ ರ್ಯಾಂಕ್‌ ಪಡೆಯುವ ಅನುಭವವನ್ನು ಕೂಡ ಪಡೆಯುತ್ತಾರೆ.

    ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಕಾಲೇಜಿನ ತರಗತಿಗಳ ಜೊತೆಗೆ, ಮನೆಯಲ್ಲಿ ಇದ್ದಾಗಲೂ ತಮ್ಮ ಸಮಯಕ್ಕನುಗುಣವಾಗಿ ನಿರಂತರ ಅಭ್ಯಾಸವನ್ನು ಮಾಡಬಹುದು ಹಾಗೂ ಸಂದೇಹಗಳನ್ನೂ ಪರಿಹರಿಸಿಕೊಳ್ಳಬಹುದಾಗಿದೆ.

    ಈ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ವಿಶೇಷವಾಗಿ ಉಪಯುಕ್ತವಾಗಲಿದ್ದು, ಅವರ ಶೈಕ್ಷಣಿಕ ಸಾಧನೆಗೆ ಹೊಸ ಉತ್ಸಾಹ ನೀಡಲಿದೆ ಹಾಗೂ ಅವರಿಗೆ ನಿರಂತರ ಅಭ್ಯಾಸ ತರಗತಿಗಳು, ಪರೀಕ್ಷೆಗಳು ಹಾಗೂ Mock Testಗಳನ್ನು ಒದಗಿಸುತ್ತಾ, JEE, NEET ಪರೀಕ್ಷೆಗಳು ಸಮೀಪಿಸುವ ಸಮಯದಲ್ಲಿ ಎರಡು ತಿಂಗಳುಗಳ ಕಾಲ ಪ್ರತಿದಿನ ನಿರಂತರ ಪರೀಕ್ಷೆಗಳ ಮೂಲಕ ವಿದ್ಯಾರ್ಥಿಗಳನ್ನು ಪೂರ್ಣಸಿದ್ಧತೆಗೆ ತರಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

    Click here

    Click here

    Click here

    Click Here

    Call us

    Call us

    ಕಡಿಮೆ‌ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಾ ಬರುತ್ತಿರುವ ಈ ಸಂಸ್ಥೆ, ಈಗ ಇಂತಹ ಆಧುನಿಕ ಸೌಲಭ್ಯಗಳನ್ನು ಸೇರಿಸಿಕೊಂಡಿರುವುದು ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರಯೋಜನಕಾರಿಯಾಗಲಿದೆ.

    ಸಂಸ್ಥೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಉತ್ತಮ ಶಿಕ್ಷಣ ಹಾಗೂ ರಾಜ್ಯ- ರಾಷ್ಟ್ರಮಟ್ಟದ ಅವಕಾಶಗಳನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು ಮತ್ತು ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    fourteen − seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.