ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಮತ್ತು ಗಂಗೊಳ್ಳಿ ವಲಯ ಅಂಗನವಾಡಿ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಅಂಗನವಾಡಿ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಾಕುಹಿತ್ಲು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆಯಿತು.
ಡಾ. ಕಲಾಶ್ರೀ ಕಾರ್ಯಕ್ರಮವನ್ನು ಉದ್ಘಾಟಿಸಿ 30 ಪ್ರತಿಭಾನ್ವಿತ ಅಂಗನವಾಡಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಶುಭ ಹಾರೈಸಿದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ಅಧ್ಯಕ್ಷೆ ಸುಮಿತ್ರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ಗಂಗೊಳ್ಳಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಿ.ಈಶ್ವರ, ಶೋಭಾ ಎಸ್.ಕೆ., ಶೇಷಮ್ಮ, ಕಮಲ, ರೇಖಾ ಖಾರ್ವಿ, ಸಂಗೀತಾ ಬಿ., ಸಹನಾ, ನಿಖಿತಾ, ಅಂಗನವಾಡಿ ಸಹಾಯಕಿಯರು ಮೊದಲಾವದರು ಉಪಸ್ಥಿತರಿದ್ದರು.
ಸುಮಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ರೇಖಾ ಖಾರ್ವಿ ವಂದಿಸಿದರು.










