Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೆಸಾ ಪಿಯು ಕಾಲೇಜು, ಶಂಕರನಾರಾಯಣ – ವಿಜ್ಞಾನ ವಿಭಾಗದಲ್ಲಿ ಉತ್ತಮ ಶೈಕ್ಷಣಿಕ ಸಾಧನೆ. ಪ್ರವೇಶಾತಿ ಪ್ರಾರಂಭ
    ಕ್ಯಾಂಪಸ್ ಕಾರ್ನರ್

    ಮದರ್ ತೆರೆಸಾ ಪಿಯು ಕಾಲೇಜು, ಶಂಕರನಾರಾಯಣ – ವಿಜ್ಞಾನ ವಿಭಾಗದಲ್ಲಿ ಉತ್ತಮ ಶೈಕ್ಷಣಿಕ ಸಾಧನೆ. ಪ್ರವೇಶಾತಿ ಪ್ರಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಪಿಯು ಕಾಲೇಜಿನಲ್ಲಿ ವಿಜ್ಞಾನಾಧಾರಿತ ಶಿಕ್ಷಣವನ್ನು ಸ್ಪರ್ಧಾತ್ಮಕ ಯುಗದ ಅಗತ್ಯಗಳಿಗೆ ತಕ್ಕಂತೆ ರೂಪಿಸುತ್ತಾ ಬರಲಾಗುತ್ತಿದ್ದು, ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಚಿಂತನೆ ಹಾಗೂ ಲಕ್ಷ್ಯಾಧಾರಿತ ಅಭ್ಯಾಸಕ್ಕೆ ಒತ್ತು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯುತ್ತಿದ್ದಾರೆ.

    Click Here

    Call us

    Click Here

    PCMB ಹಾಗೂ PCMCs ಸಂಯೋಜನೆಗಳ ಮೂಲಕ ಪಿಯು ಬೋರ್ಡ್ ಪಠ್ಯಕ್ರಮದ ಜೊತೆಗೆ JEE Mains, NEET ಹಾಗೂ KCET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಮನ್ವಯಿತ ತರಬೇತಿ ನೀಡಲಾಗುತ್ತಿದೆ. ಅಧ್ಯಾಯವಾರು ಅಭ್ಯಾಸ, ನಿಯಮಿತ Mock Testಗಳು ಹಾಗೂ ತೀವ್ರ ತರಬೇತಿ ಮೂಲಕ ವಿದ್ಯಾರ್ಥಿಗಳ ಸಿದ್ಧತೆಯನ್ನು ಬಲಪಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ಒತ್ತಡ ನೀಡದೆ, ಸ್ವಾಭಾವಿಕವಾಗಿ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾ ಉತ್ತಮ ಫಲಿತಾಂಶ ಸಾಧನೆಗೆ ಶ್ರಮಿಸಲಾಗುತ್ತಿದೆ. ಜೊತೆಗೆ ಪಿಯು ಬೋರ್ಡ್ ಪರೀಕ್ಷೆಗೂ ಸಮಾನ ಮಹತ್ವ ನೀಡಲಾಗುತ್ತಿದ್ದು, ಪಠ್ಯಕ್ರಮದ ಅವಿಭಾಜ್ಯ ಭಾಗವಾದ ಪ್ರಯೋಗಾಲಯ ತರಗತಿಗಳನ್ನು ಯಾವುದೇ ತಾತ್ಕಾಲಿಕ ಕ್ರಮಕ್ಕೆ ಸೀಮಿತಗೊಳಿಸದೆ, ವರ್ಷಪೂರ್ತಿ ನಿಯಮಿತವಾಗಿ ಹಾಗೂ ಕ್ರಮಬದ್ಧವಾಗಿ ನಡೆಸಲಾಗುತ್ತಿದೆ. ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮತೋಲಿತ ಸಾಧನೆಗೆ ಒತ್ತು ನೀಡಲಾಗುತ್ತಿದೆ.

    ಕಳೆದ ಶೈಕ್ಷಣಿಕ ವರ್ಷದಿಂದ ಕಾಲೇಜಿನ ಪ್ರಾಂಶುಪಾಲರಾಗಿಯೂ ಹಾಗೂ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸುತ್ತಿರುವ 20ಕ್ಕೂ ಹೆಚ್ಚು ವರ್ಷಗಳ JEE,‌ NEET, KCET ತರಬೇತಿಯ ಅಪಾರ ಅನುಭವ ಹೊಂದಿರುವ ಶ್ರೀ ಜೈಸನ್ ಬಿ. ಲೂಯಿಸ್ ಅವರ ದಕ್ಷ ನೇತೃತ್ವದಲ್ಲಿ ವಿಜ್ಞಾನ ವಿಭಾಗದಲ್ಲಿ ಹಲವು ಶೈಕ್ಷಣಿಕ ಸುಧಾರಣೆಗಳನ್ನು ಅಳವಡಿಸಲಾಗಿದ್ದು, ಅನುಭವಿ ಉಪನ್ಯಾಸಕರ ತಂಡದೊಂದಿಗೆ ಬೋಧನಾ ವ್ಯವಸ್ಥೆಯನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಮತ್ತಷ್ಟು ಬಲಪಡಿಸಲಾಗಿದೆ.

    ಇದರ ಜೊತೆಗೆ ಈ ಶೈಕ್ಷಣಿಕ ವರ್ಷದಿಂದ ಭಾರತದ ಪ್ರಸಿದ್ಧ ಶಿಕ್ಷಣ ಸಂಸ್ಥೆ ವೇದಾಂತು ಇದರ ಸಹಯೋಗವನ್ನು ಸ್ಥಾಪಿಸಲಾಗಿದ್ದು, KCET, JEE Mains ಹಾಗೂ NEET ಪರೀಕ್ಷೆಗಳಿಗಾಗಿ ಪೂರಕ ಅಧ್ಯಯನ ವೇದಿಕೆ, ದಿನದ 24 ಗಂಟೆಗಳ ಸಂಶಯ ನಿವಾರಣಾ ವ್ಯವಸ್ಥೆ, ನಿಯಮಿತ ಪರೀಕ್ಷಾ ಸರಣಿಗಳು ಹಾಗೂ ರಾಷ್ಟ್ರಮಟ್ಟದ ಮಾದರಿ ಪರೀಕ್ಷೆಗಳ ಮೂಲಕ ವಿದ್ಯಾರ್ಥಿಗಳಿಗೆ ಕಾಲೇಜಿನ ತರಗತಿಗಳ ಜೊತೆಗೆ ಹೆಚ್ಚುವರಿ ಶೈಕ್ಷಣಿಕ ಬೆಂಬಲ ಒದಗಿಸಲಾಗುತ್ತಿದೆ

    ಈ ವರ್ಷದ ವಾರ್ಷಿಕ ಪರೀಕ್ಷೆಗೆ ವಿಜ್ಞಾನ ವಿಭಾಗದ 110 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಸಂಜನಾ 595 ಅಂಕಗಳೊಂದಿಗೆ ರಾಜ್ಯದಲ್ಲಿ 5ನೇ, ಜಿಲ್ಲೆ ಹಾಗೂ ತಾಲೂಕಿನಲ್ಲಿ 4ನೇ ರ‍್ಯಾಂಕ್ ಗಳಿಸಿ ಶ್ರೇಷ್ಠ ಸಾಧನೆ ದಾಖಲಿಸಿದ್ದಾಳೆ. ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳನ್ನು 37 ವಿದ್ಯಾರ್ಥಿಗಳು, 80–90% ಅಂಕಗಳನ್ನು 41 ವಿದ್ಯಾರ್ಥಿಗಳು ಹಾಗೂ ಉಳಿದವರು 70–80% ಅಂಕಗಳನ್ನು ಪಡೆದಿದ್ದಾರೆ. ಒಟ್ಟು 56 ಮಂದಿ ಡಿಸ್ಟಿಂಕ್ಷನ್ ಹಾಗೂ 54 ಮಂದಿ ಉನ್ನತ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಶೈಕ್ಷಣಿಕ ಸಾಧನೆಯ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಸಹಪಾಠ್ಯ ಚಟುವಟಿಕೆಗಳಿಗೂ ಸಮಾನ ಅವಕಾಶ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಲಾಗುತ್ತಿದೆ.

    Click here

    Click here

    Click here

    Click Here

    Call us

    Call us

    ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಈ ಸಂಸ್ಥೆಯ ಕುರಿತು ಪೋಷಕರಲ್ಲಿ ವಿಶ್ವಾಸ ಹಾಗೂ ಆಸಕ್ತಿ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಪಠ್ಯಕ್ರಮದ ಸಮತೋಲಿತ ನಿರ್ವಹಣೆ, ಸ್ಪರ್ಧಾತ್ಮಕ ತರಬೇತಿ ಮತ್ತು ಫಲಿತಾಂಶಗಳ ಸ್ಥಿರತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶದ ಬಗ್ಗೆ ಪೋಷಕರ ಸಕಾರಾತ್ಮಕ ಪ್ರತಿಕ್ರಿಯೆ ಹೆಚ್ಚುತ್ತಿದೆ.

    ಇದೀಗ 2026–27ನೇ ಸಾಲಿನ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಲೇಜಿಗೆ ಭೇಟಿ ನೀಡಿ ಪ್ರವೇಶ ಪಡೆಯಲು ಆಹ್ವಾನಿಸಲಾಗಿದೆ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    two + fourteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.