Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತ್ರಾಸಿ ಮರವಂತೆ ಹೆದ್ದಾರಿಯಲ್ಲಿ ಭೀಕರ ಅಪಘಾತ. ಮೂವರು ಸಾವು, ವಿದ್ಯಾರ್ಥಿಗಳಿಗೆ ಗಾಯ
    ಊರ್ಮನೆ ಸಮಾಚಾರ

    ತ್ರಾಸಿ ಮರವಂತೆ ಹೆದ್ದಾರಿಯಲ್ಲಿ ಭೀಕರ ಅಪಘಾತ. ಮೂವರು ಸಾವು, ವಿದ್ಯಾರ್ಥಿಗಳಿಗೆ ಗಾಯ

    Updated:21/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ,ಎ.29: ತಾಲೂಕಿನ ತ್ರಾಸಿ – ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಅಪಘಾತದಲ್ಲಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.

    Click Here

    Call us

    Click Here

    ಬೈಂದೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬಸ್, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್ ಮತ್ತು ಲಾರಿಗೆ ನಿಯಂತ್ರಣ ತಪ್ಪಿ ಮಧ್ಯಾಹ್ನ 1:30ರ ಸಮಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಬಸ್ಸಿನ ಹೆಚ್ಚುವರಿ ಚಾಲಕ ರಘು, ಕ್ಲೀನರ್ ರಂಗನಾಥ್ ಹಾಗೂ ಅಡುಗೆ ಸಹಾಯಕ ಹೇಮಂತ್ ಮೃತಪಟ್ಟಿದ್ದಾರೆ. ಇವರ ಜೊತೆಯಲ್ಲಿದ್ದ ವಿದ್ಯಾರ್ಥಿಯೋರ್ವನಿಗೂ ಗಂಭೀರ ಗಾಯವಾಗಿದೆ. 

    ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನಿಂದ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ 3 ದಿನಗಳ ಪ್ರವಾಸಕ್ಕೆ ಹೊರಟ್ಟಿದ್ದರು. ನಿನ್ನೆ ಹೊನ್ನಾವರದಲ್ಲಿ ಪ್ರವಾಸಿ ಮುಗಿಸಿ ಅಲ್ಲಿಯೇ ಉಳಿದು, ಇಂದು ಉಡುಪಿ ಕಡೆಗೆ ಹೊರಟಿದ್ದರು. ಮರವಂತೆಯಲ್ಲಿ ಬಸ್ ನಿಲ್ಲಿಸಿ ಬೀಚ್‌ಗೆ ತೆರಳಿ ಅಲ್ಲಿಂದ ಪ್ರಯಾಣ ಮುಂದುವರಿಸುವ ವೇಳೆ ಏಕಾಏಕಿ ಈ ಅವಘಡ ನಡೆದಿದೆ. ಮರವಂತೆಯಿಂದ ಒಂದು ಕಿ.ಮೀ ಸಾಗಿದ್ದ ಬಸ್ಸು ಏಕಾಎಕಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರಿನ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಬಳಿಕ ಅಲ್ಲೇ ಎದುರಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿ ನಿಂತಿದೆ. ಅಪಘಾತದ ತೀವ್ರತೆಗೆ ನಾಲ್ವರು ಗಂಭೀರ ಗಾಯಗೊಂಡಿದ್ದರು. ಅಪಘಾತ ನಡೆದ ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದು ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ‌ ಆಸ್ಪತ್ರೆಗೆ ಸಾಗಿಸಲಾಗಿತು. ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳನ್ನು ಕುಂದಾಪುರದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    54 ವಿದ್ಯಾರ್ಥಿಗಳು, 4 ಮಂದಿ‌ ಉಪನ್ಯಾಸಕರು, ಸಹಾಯಕ ಸಿಬ್ಬಂದಿಗಳು, ಅಡುಗೆಯವರು, ಕ್ಲೀನರ್ ಬಸ್ಸಿನಲ್ಲಿದ್ದರು. ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಗಾಯಗೊಂಡ 3 ವಿದ್ಯಾರ್ಥಿಗಳಿಗೆ ಚಿಕ್ಕ ಸರ್ಜರಿ ಮಾಡಲಾಗಿದ್ದು, ಉಳಿದೆಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

    ಶಾಸಕರಿಂದ ರಕ್ಷಣಾ ಕಾರ್ಯ, ಆಸ್ಪತ್ರೆ ಭೇಟಿ:
    ಘಟನಾ ಸ್ಥಳಕ್ಕೆ ಬೈಂದೂರು ಶಾಸಕ‌ ಗುರುರಾಜ ಗಂಟಿಹೊಳೆ ಧಾವಿಸಿ ಬಂದು ಸ್ಥಳಿಯರೊಂದಿಗೆ ರಕ್ಷಣಾ ಕಾರ್ಯದಲ್ಲಿ ಜೊತೆಯಾದರು. ಸ್ವತಃ ಬಸ್‌ ಏರಿ ವಿದ್ಯಾರ್ಥಿಗಳ ಲಗೇಜುಗಳನ್ನು ಕೆಳಕ್ಕಿಳಿಸುವ ಕಾರ್ಯಕ್ಕೆ ಮುಂದಾದರು. ಸಂಸದ ಬಿ.ವೈ. ರಾಘವೇಂದ್ರ ಅವರು ದೂರವಾಣಿ ಮೂಲಕ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಶಾಸಕರೊಂದಿಗೆ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಸಂತೈಸಿದರು.

    Click here

    Click here

    Click here

    Click Here

    Call us

    Call us

    ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಹರಿರಾಮ್‌ ಶಂಕರ್‌,  ಡಿವೈಎಸ್ಪಿ ಹೆಚ್‌.ಡಿ. ಕುಲಕರ್ಣಿ, ವೃತ್ತ ನಿರೀಕ್ಷಕ ಶಿವಕುಮಾರ ಬಿ ಗಂಗೊಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ ಪವನ್‌ ನಾಯಕ್ (ಕಾ & ಸು) ಹಾಗೂ ಸುದರ್ಶನ್‌ ಬಿ.ಎನ್‌ (ತನಿಖೆ) ಭೇಟಿ ನೀಡಿ ಮಾಹಿತಿ ಪಡೆದರು.

    ಅಫಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಗಂಗೊಳ್ಳಿ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    9 − 8 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.