Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ
    ಉಡುಪಿ ಜಿಲ್ಲೆ

    ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಘನ ತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿಯೇ ವಿವಿಧ ತ್ಯಾಜ್ಯಗಳನ್ನು ವಿಂಗಡಣೆ ಮಾಡಿ, ಸಂಗ್ರಹಣೆ, ಸಾಗಾಣಿಕೆ, ಸಂಸ್ಕರಣೆ ಹಾಗೂ ಅವುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಘನತ್ಯಾಜ್ಯ ನಿರ್ವಹಣೆ – ನಿಯಮಗಳು 2026 ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ವಿಶೇಷ ಸೆಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಘನ ತ್ಯಾಜ್ಯಗಳ ನಿರ್ಲಕ್ಷಿಸುವುದರಿಂದ ಆರ್ಥಿಕತೆ ಅಷ್ಟೇ ಅಲ್ಲದೇ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಮನುಷ್ಯ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯಗಳನ್ನು ಮೂಲದಲ್ಲಿಯೇ ನಾಲ್ಕು ವಿಧಧ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ ( ಬಲ್ಬ್ಗಳು, ಬ್ಯಾಟರಿಗಳು, ಅವಧಿ ಮೀರಿದ ಔಷಧಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆಯನ್ನು ಸಾರ್ವಜನಿಕರಿಂದ ಮಾಡಿಸಿ, ಸಂಗ್ರಹಿಸಿ, ಅವುಗಳನ್ನು ಸಾಗಾಣಿಕೆ ಮಾಡಿ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕೆಂದರು.

    ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರಿಂದ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಯನ್ನು ಉತ್ತೇಜಿಸಲು ಹಾಗೂ ಎಲ್ಲಾ ತ್ಯಾಜ್ಯ ಉತ್ಪಾದಕರಲ್ಲಿ ಅರಿವು ಮೂಡಿಸಲು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳನ್ನು ಮುಖ್ಯ ಮಾರ್ಗದರ್ಶಕರನ್ನಾಗಿ ನೇಮಕ ಮಾಡಿಕೊಂಡು ಸ್ವಯಂ ಸೇವಕರು, ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದರು.

    ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘಬತ್ಯಾಜ್ಯ ನಿರ್ವಹಣಾ ನಿಯಮದ ಅನ್ವಯ ಬೃಹತ್ ತ್ಯಾಜ್ಯ ಉತ್ಪಾದಕರನ್ನು ಗುರುತಿಸಿ, ನೋಂದಾಯಿಸಿಕೊಳ್ಳಬೇಕು. ಅಲ್ಲಿ ಉತ್ಪಾದನೆಯಾದ ತ್ಯಾಜ್ಯವನ್ನು ಸ್ಥಳದಲ್ಲಿಯೇ ಸಂಸ್ಕರಿಸಬೇಕು. ತ್ಯಾಜ್ಯ ಸಂಸ್ಕರಣಾ ಸೌಲಭ್ಯ ಲಭ್ಯವಿಲ್ಲದಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಉತ್ಪಾದಕರಿಂದ ವಿಂಗಡಿತ ತ್ಯಾಜ್ಯವನ್ನು ಸ್ವೀಕರಿಸಬೇಕು ಅವರಿಂದ ಬೈಲಾ ಪ್ರಕಾರ ನಿಗಧಿಪಡಿಸಿದ ಶುಲ್ಕ ವಸೂಲಿ ಮಾಡಿ ಪ್ರಮಾಣ ಪತ್ರವನ್ನು ನೀಡಬೇಕು ಎಂದರು.

    ಘನತ್ಯಾಜ್ಯ ನಿರ್ವಹಣೆ ನಿಯಮಗಳ ಅನುಷ್ಠಾನ ಮೇಲ್ವಿಚಾರಣೆಗೆ ವಿಶೇಷ ಸೆಲ್‌ಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡಂತೆ ರಚಿಸಬೇಕು. ಸಮಿತಿಯು ಎಸ್.ಡಬ್ಲೂ.ಎಂ ನಿಯಮಗಳ ಅನುಷ್ಠಾನಗೊಳಿಸುವುದನ್ನು ಮೇಲ್ವಿಚಾರಣೆ ಮಾಡಬೇಕು. ಒಂದೊಮ್ಮೆ ತ್ಯಾಜ್ಯ ವಿಲೇವಾರಿಯ ನಿರ್ವಹಣೆಯನ್ನು ಸರಿಯಾಗಿ ಅನುಸರಣೆ ಮಾಡದಿದ್ದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಸ್ಪೆಷಲ್ ಕೇರ್ ವೇಸ್ಟೇಜ್ ಅನ್ನು ಸಮರ್ಪಕವಾಗಿ ಸಂಗ್ರಹಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಈ ಉದ್ದೇಶಕ್ಕೆ ಪ್ರತಿ ಐದು ಚದರ ಕಿಲೋ ಮೀಟರ್ ಪ್ರದೇಶಕ್ಕೆ ಕನಿಷ್ಟ ಒಂದು ಸಂಗ್ರಹಣಾ ಕೇಂದ್ರವನ್ನು ಸ್ಥಾಪಿಸಬೇಕು ಹಾಗೂ ಇಲ್ಲಿ ಸ್ವೀಕರಿಸುವ ಸಮಯವನ್ನು ಅಧಿಕೃತವಾಗಿ ಪ್ರಕಟಿಸಬೇಕು ಎಂದರು.

    ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ರಸ್ತೆಗಳ ಸ್ವಚ್ಛತೆಯನ್ನು ನಿಯಮಿತವಾಗಿ ಕೈಗೊಳ್ಳಬೇಕು ಹಾಗೂ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಿ, ಅವು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಕಸಗಳನ್ನು ಎಲ್ಲೆಂದರಲ್ಲಿ ಎಸೆದರೆ ಅವರುಗಳಿಂದ ದಂಡ ವಸೂಲಿ ಮಾಡಬೇಕು. ಈ ಸಂಬAಧ ಅಗತ್ಯವಿರುವ ಕಡೆ ಸಿಸಿಟಿವಿ ಗಳನ್ನು ಸಹ ಅಳವಡಿಸಬೇಕು ಎಂದರು.

    ಸ್ಥಳೀಯ ಸಂಸ್ಥೆಗಳು ಪ್ರತ್ಯೇಕವಾಗಿ ಸಂಗ್ರಹಿಸಿದ ಒಣ ತ್ಯಾಜ್ಯವನ್ನು ಎಂ.ಆರ್.ಎಫ್ ಘಟಕಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳು, ಮರುಬಳಕೆ ಮಾಡಲಾಗದ ವಸ್ತುಗಳು, ದಹನಕಾರಿ ತ್ಯಾಜ್ಯ, ನಿಷ್ಕ್ರೀಯ ತ್ಯಾಜ್ಯಗಳು ಎಂದು ಮರು ವಿಂಗಡಣೆ ಮಾಡಿ, ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದ ಅವರು, ನಾಗರಿಕರು ಬಳಸಿದ ವಸ್ತುಗಳು, ಬಟ್ಟೆಗಳು, ಎಲೆಕ್ಟಾçನಿಕ್ ಉತ್ಪನ್ನಗಳು, ಪುಸ್ತಕಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ದಾನ ಮಾಡಲು ಆರ್.ಆರ್.ಆರ್ ಘಟಕಗಳನ್ನು ಸ್ಥಾಪಿಸಬೇಕು ಎಂದರು.

    ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು ಹಾಗೂ ಕಡಲ ತೀರಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ವಸ್ತುಗಳ ನಿರ್ವಹಣೆಗೆ ವಿಶೇಷ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದ ಅವರು, ಪ್ಲಾಸ್ಟಿಕ್ ಬಾಟಲಿಗಳ ಸಂಗ್ರಹಕ್ಕೆ ವಿಶೇಷ ಪರಿಕರಗಳ ವ್ಯವಸ್ಥೆ ಮಾಡಬೇಕು ಎಂದರು.

    ಘನತ್ಯಾಜ್ಯಗಳ ನಿರ್ವಹಣೆ ಸಮರ್ಪಕ ಅನುಷ್ಠಾನ ಕುರಿತು ಪ್ರತೀ ವಾರ್ಡ್ಗೆ ಒಬ್ಬರನ್ನು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದ ಅವರು, ದ್ವಿತೀಯ ಹಂತದಲ್ಲಿ ತ್ಯಾಜ್ಯ ಸಾಗಾಣಿಕೆಗೆ ಸಂಪೂರ್ಣ ಮುಚ್ಚಿದ ವಾಹನಗಳನ್ನು ಬಳಸುವಂತೆ ವ್ಯವಸ್ಥೆ ಮಾಡಬೇಕೆಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    16 − 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.