Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ
    ಉಡುಪಿ ಜಿಲ್ಲೆ

    ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಹಿಳೆಯರು ಕೆಲಸ ನಿರ್ವಹಿಸುತ್ತಿರುವ ಸಂಸ್ಥೆ, ಕಚೇರಿಗಳಲ್ಲಿ ಲೈಂಗಿಕ ದೌರ್ಜನ್ಯ ಕ್ಕೆ ಒಳಗಾದಲ್ಲಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಆಂತರಿಕ ದೂರು ಸಮಿತಿಯನ್ನು ರಚಿಸಿ, ದೂರುಗಳು ಬಂದಾಗ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮಹಿಳೆಯರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳಾ ಸ್ಪಂದನಾ ಮತ್ತು ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಉದ್ಯೋಗಸ್ಥ ಮಹಿಳೆಯರು ತಮ್ಮ ಕಾರ್ಯ ನಿರ್ವಹಿಸುತ್ತಿರುವ ಜಾಗದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದಲ್ಲಿ ದೂರುಗಳನ್ನು ನೀಡಲು ಅನುಕೂಲವಾಗುವಂತೆ, ಸರಕಾರದ ಆದೇಶದಂತೆ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ಸರಕಾರಿ, ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು. ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆಯನ್ನು ನಡೆಸಬೇಕು. ಆಂತರಿಕ ಸಮಿತಿಯ ಕಾರ್ಯ ನಿರ್ವಹಣೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು. ಈ ಸಮಿತಿಯ ರಚಿಸುವುದರೊಂದಿಗೆ ಸಮಿತಿಯ ಅಧ್ಯಕ್ಷರು, ಇತರೆ ಸದಸ್ಯರ ಹೆಸರಗಳನ್ನು ಕಡ್ಡಾಯವಾಗಿ ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದರು.

    ಜಿಲ್ಲೆಯಲ್ಲಿ 345 ಸರಕಾರಿ ಕಚೇರಿಗಳು ಹಾಗೂ 444 ಖಾಸಗಿ ಕಚೇರಿ ಸೇರಿದಂತೆ 789 ಆಂತರಿಕ ದೂರು ಸಮಿತಿಗಳ ರಚನೆಯಾಗಿದೆ. SHe ಬಾಕ್ಸ್ ಪೋರ್ಟಲ್ ನಲ್ಲಿ 346 ಸಮಿತಿಯ ಮಾಹಿತಿಯನ್ನು ನಮೂದಿಸಲಾಗಿದೆ. ಬಾಕಿ ಉಳಿದಿರುವ 443 ಸಮಿತಿಗಳ ಮಾಹಿತಿಯನ್ನು ಇಂಡೀಕರಿಸುವಂತೆ ಸೂಚಿಸಿದ ಅವರು, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ -2013 ((POSH DPïÖ)) ಕಾಯಿದೆ ಕೇವಲ ಕಾಗದಕ್ಕೆ ಸೀಮಿತವಾಗದೇ ಅನುಷ್ಠಾನ ಕಾರ್ಯವು ಸರಿಯಾದ ರೀತಿಯಲ್ಲಿ ಮಹಿಳೆಯರ ಸಮಸ್ಯೆಗೆ ಸ್ಪಂದಿಸುವಂತಾಗಬೇಕು ಎಂದರು.

    ಸರಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತವೆ. ಇವು ಅರ್ಹ ಪ್ರತಿಯೊಬ್ಬ ಫಲನುಭವಿಗಳಿಗೂ ತಲುಪಬೇಕು. ಇಂದು ಬೆಳಗ್ಗೆ ಮಲ್ಪೆ ಬಂದರಿನಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರನ್ನು ಸಂದರ್ಶಿಸಿದಾಗ ಅವರುಗಳಲ್ಲಿ ನೈಜ ಫಲನುಭವಿಗಳಾಗುವಂತಿದ್ದರೂ ಸಹ ಸರಕಾರದ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕಾರಣ ಅವರಿಗೆ ಅರಿವಿನ ಕೊರತೆ ಇದೆ. ಸರಕಾರದ ಸೌಲಭ್ಯ ತಿಳಿಸುವ ವಿಶೇಷ ಶಿಬಿರ ಆಯೋಜಿಸುವುದರೊಂದಿಗೆ ಅವರುಗಳಿಗೆ ಸೌಲಭ್ಯ ತಲುಪಿಸಿ, ಆಯೋಗಕ್ಕೆ ವರದಿ ಮಾಡುವಂತೆ ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು. ಸಿ.ಸಿ.ಟಿವಿ ಗಳನ್ನು ಅಳವಡಿಸಬೇಕು. ಶೌಚಾಲಯಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದ ಅವರು, ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಲಭ್ಯ ವಾಗುವಂತೆ ನೋಡಿಕೊಳ್ಳಬೇಕು ಎಂದು ಬಂದರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಮಾಜದಲ್ಲಿ ದುರ್ಬಲರಾದ ಮಹಿಳೆಯರು ಸಮಸ್ಯೆಯ ಸುಳಿಯಲ್ಲಿ ಸಿಕ್ಕಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗಳಿಗೆ ಬಂದಾಗ, ಅವರ ಸಮಸ್ಯೆಗಳನ್ನು ಸಂಯಮದಿಂದ ಕೇಳಿ ತಿಳಿದು ಅವರಿಗೆ ನ್ಯಾಯ ಒದಗಿಸುವ ಕಾರ್ಯಗಳನ್ನು ಮಾಡುವುದರೊಂದಿಗೆ ಸ್ಪಂದಿಸಬೇಕು. ಕಾಲೇಜಿನ ಸಮೀಪದಲ್ಲಿ ಮಾದಕ ವಸ್ತುಗಳ ತಡೆಗೆ ಕ್ರಮ ವಹಿಸಬೇಕು ಎಂದ ಅವರು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮಹಿಳೆಯರು ಹೋದಾಗ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರುಗಳು ಕೇಳಿ ಬರುತ್ತಿವೆ ಹಾಗೂ ಜಿಲ್ಲೆಯಲ್ಲಿ ಕೆಲವು ಮಹಿಳೆಯರ ಮೇಲೆ ಎಫ್.ಐ.ಆರ್ ಆಗಿರುವುದು ಕಂಡು ಬಂದಿದೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

    ಪರಿಶಿಷ್ಟ ಜಾತಿ, ಪಂಗಡದವರಿಗೆ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಕೊರತೆಯಿಂದಾಗಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸರಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವುದರೊಂದಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರಕುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

    ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೇರ್ಪಡೆಗೆ ಅವಕಾಶಗಳು ದೊರೆಯುತ್ತಿಲ್ಲ ಎಂಬ ಬಗ್ಗೆ ಕೇಳಿಬರುತ್ತಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಹೊಸ ಹಾಸ್ಟೆಲ್‌ಗಳ ಪ್ರಾರಂಭಕ್ಕೆ ಪ್ರಯತ್ನಿಸಲಾಗುವುದು ಎಂದ ಅವರು, ಪ್ರಸ್ತುತ ಹಾಸ್ಟೆಲ್‌ಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

    ವಿಶೇಷಚೇತನ ಶಾಲೆಗಳಲ್ಲಿ ವಿಶೇಷ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ಗೌರವಧನಗಳು ಸಿಗುತ್ತಿಲ್ಲ ಎಂಬ ದೂರುಗಳು ಬರುತ್ತಿದೆ. ಇದಕ್ಕೆ ಕೂಡಲೇ ಸ್ಪಂದಿಸಬೇಕು ಎಂದ ಅವರು, ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಋತು ಚಕ್ರ ರಜೆ, ಹೆರಿಗೆ ರಜೆ ಸೌಲಭ್ಯ ಸೇರಿದಂತೆ ಮತ್ತಿತರ ನಿಯಮಾನುಸಾರ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

    ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದೈನಂದಿನ ಆರೋಗ್ಯ ಸೇವೆಗಳ ಚಟುವಟಿಕೆಗಳು ನಡೆಯಲು ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆಯ ಮೇಲೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.

    ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆಯಿಂದಾಗಿ ಕಳೆದ ಒಂದು ವರ್ಷದಿಂದ ಹೆರಿಗೆಗಾಗಿ ಹೆಣ್ಣು ಮಕ್ಕಳು ಇತರೆ ತಾಲೂಕು ಅಥವಾ ಜಿಲ್ಲೆಗೆ ಹೋಗುವಂತಹ ಅನಿವಾರ್ಯತೆ ಉಂಟಾಗಿದೆ. ಕೂಡಲೇ ಹೆರಿಗೆ ತಜ್ಞರನ್ನು ನೇಮಕ ಮಾಡಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದರು.

    ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ಸುಮಾರು 54 ಪ್ರಕರಣಗಳ ವಿಚಾರಣೆ ನಡೆಸುವುದರೊಂದಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸೂಚನೆ ನೀಡಿದರು.

    ಕಾರ್ಯಕ್ರಮದಲ್ಲಿ ಆಯೋಗದ ಕಾರ್ಯದರ್ಶಿ ರೂಪ ಆರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ: ಡಾ. ನಾಗಲಕ್ಷ್ಮೀ ಚೌಧರಿ

    26/05/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026
    Leave A Reply Cancel Reply

    four + ten =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ
    • ಕುಡಿತದ ಚಟವಿದ್ದ ವ್ಯಕ್ತಿ ಸಾವು
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.