Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಟಿ. ರಘುಮೂರ್ತಿ
    ಉಡುಪಿ ಜಿಲ್ಲೆ

    ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಟಿ. ರಘುಮೂರ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿ ನಗರ ಹಾಗೂ ಕೆಲವು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾಮಗಾರಿಯ ಪ್ರಗತಿಯ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಗಳು ಉಂಟಾಗುತ್ತವೆ. ಇವುಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಿ ಕುಡಿಯುವ ನೀರನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾದ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವತಿಯಿಂದ ನಡೆಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಅಗತ್ಯ ವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಕೈಗೊಳ್ಳುತ್ತದೆ. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಳಂಬವಿಲ್ಲದೆ ಪೂರ್ಣಗೊಳಿಸಿ, ಜನಸಾಮಾನ್ಯರ ಸದುಪಯೋಗಕ್ಕೆ ಅವಕಾಶ ಮಾಡಿಕೊಡಬೇಕು. ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಪ್ರತಿದಿನ 45 ಎಂ.ಎಲ್.ಡಿ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದರು.

    ಉಡುಪಿ ನಗರಕ್ಕೆ ಪ್ರಸ್ತುತ ಬಜೆ ಹಾಗೂ ಹಾಲಾಡಿಯ ಕೆ.ಎನ್.ಎನ್.ಎಲ್ ನಾಲೆಯಿಂದ ತಾತ್ಕಾಲಿಕವಾಗಿ ನೀರು ನೀಡಲಾಗುತ್ತಿದೆ. ಭರತ್ಕಲ್ ಜಾಕ್‌ವೆಲ್‌ನಿಂದ ಹಾಲಾಡಿ ನೀರು ಶುದ್ದೀಕರಣ ಘಟಕದವರೆಗೆ 3 ಕಿ.ಮೀ ನ ಪೈಪ್‌ಲೈನ್ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಯನ್ನು ಶೀಘ್ರದಲ್ಲಿಯೇ ಮುಕ್ತಾಯಗೊಳಿಸಬೇಕು ಎಂದರು.

    ಕಾಮಗಾರಿಯ ವಿಳಂಬದಿಂದಾಗಿ ಯೋಜನಾ ವೆಚ್ಚವು ದಿನದಿಂದ ದಿನಕ್ಕೆ ಹೆಚ್ಚುತ್ತಿರುತ್ತದೆ. ದರ ಪರಿಷ್ಕರಣೆಯಲ್ಲಿ ಸಿಮೆಂಟ್ ಮತ್ತು ಕಬ್ಬಿಣದ ವಸ್ತುಗಳಿಗೆ ಮಾತ್ರ ಹೆಚ್ಚುವರಿ ನೀಡಲು ಸಾಧ್ಯ. ಕಾಮಗಾರಿಯ ವಿಳಂಬವಾದಾಗ ಹೆಚ್ಚುವರಿ ಅನುದಾನದ ಅವಶ್ಯಕತೆಯು ಉಂಟಾಗುತ್ತದೆ ಇದಕ್ಕೆ ಆಸ್ಪದ ನೀಡಬಾರದು ಎಂದರು.

    ಹಾಲಾಡಿ ನೀರು ಶುದ್ದೀಕರಣ ಘಟಕದ ಪಕ್ಕದಲ್ಲಿರುವ ವಾರಾಹಿ ಎಡದಂಡೆ ಕಾಲುವೆ ಮೂಲಕ ಕೆ.ಎನ್.ಎನ್.ಎಲ್ ಇಲಾಖೆಯವರು ಕರಾರು ಒಪ್ಪಂದದಂತೆ ಉಡುಪಿ ನಗರ ಹಾಗೂ ಇತರೆ ಗ್ರಾಮಗಳಿಗೆ ಡಿಸೆಂಬರ್ ನಿಂದ ಜೂನ್ ಅಂತ್ಯದವರೆಗೆ ನೀರು ಸರಬರಾಜು ಮಾಡಲಿದ್ದಾರೆ. ಕಾಮಗಾರಿ ಮುಗಿಯುವವರೆಗೆ ವರ್ಷಪೂರ್ತಿ ನೀಡಲು ಜಲ ಸಂಪನ್ಮೂಲ ಇಲಾಖೆಯಿಂದ ಅನುಮತಿಯನ್ನು ಪಡೆಯಬೇಕು ಎಂದ ಅವರು, ಇತರೆ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಈ ಕಮಿಟಿಯ ಗಮನಕ್ಕೆ ತರಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕುಡಿಯುವ ನೀರು ಪೈಪ್‌ಲೈನ್ ಕಾಮಗಾರಿಯು ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಬಾಕಿ ಇರುವ ಕಾಮಗಾರಿಯನ್ನು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಕಾಮಗಾರಿಯನ್ನು ಶೀಘ್ರದಲ್ಲಿಯೇ ಕೈಗೊಂಡು ಪೂರ್ಣಗೊಳಿಸಬೇಕೆಂದರು.

    ಸಮಿತಿಯ ಸದಸ್ಯರಾದ ಐವನ್ ಡಿ ಸೋಜಾ ಮಾತನಾಡಿ, ಸಾರ್ವಜನಿಕರಿಗೆ ಕುಡಿಯುವ ನೀರನ್ನು ಒದಗಿಸುವ ಹಾಗೂ ಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು 5 ರಿಂದ 6 ವಷ ತೆಗೆದುಕೊಂಡರೆ ಜನರಿಗೆ ಸಮಸ್ಯೆಗಳು ಉಂಟಾಗುತ್ತವೆ. ಕಾಮಗಾರಿಯನ್ನು ಗಂಭೀರವಾಗಿ ಪರಿಗಣಿಸಿ, ಅಡಚಣೆಗಳನ್ನು ಬಗೆಹರಿಸಿ, ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹೊಸದಾಗಿ 270 ಕಿ.ಮೀ. ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಈ ಹಿಂದೆ 2021 ರಲ್ಲಿ 330 ಕೋಟಿ ರೂ. ಅಂದಾಜು ವೆಚ್ಚದ ಯೋಜನಾ ವರದಿಯನ್ನು ಕೆ.ಯು.ಡಬ್ಲೂ.ಎಸ್. & ಡಿ.ಬಿ ಮೂಲಕ ತಯಾರಿಸಿ, ನಗರಸಭೆಯ ಮುಖಾಂತರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಈ ವ್ಯಾಪ್ತಿಯಲ್ಲಿ ಗುಡ್ಡ-ಗಾಡು, ತಗ್ಗು ಪ್ರದೇಶವಾದ್ದರಿಂದ ಅಂದಾಜು ವೆಚ್ಚವು ಜಾಸ್ತಿ ಇದ್ದ ಕಾರಣ ಅನುಮೋದನೆ ದೊರಕಿರುವುದಿಲ್ಲ. ಹೊಸದಾಗಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಸಮಿತಿಯ ಗಮನಕ್ಕೆ ತಂದರು.

    ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಜಿ.ಕೆ. ವೆಂಕಟಶಿವಾರೆಡ್ಡಿ, ಎಂ. ಕೃಷ್ಣಪ್ಪ, ಶಾಂತನಗೌಡ ಡಿ.ಜಿ, ಎಸ್. ಮುನಿರಾಜು, ಟಿ.ಎನ್ ಜವರಾಯ ಗೌಡ, ಸಮಿತಿಯ ಉಪ ಕಾರ್ಯದರ್ಶಿಗಳಾದ ಹರೀಶ ಮತ್ತು ಶ್ರೀ ವಾತ್ಸವ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

    28/05/2026

    ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    27/05/2026

    ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ: ಡಾ. ನಾಗಲಕ್ಷ್ಮೀ ಚೌಧರಿ

    26/05/2026
    Leave A Reply Cancel Reply

    two × 5 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಅಭಿಮುಖೀಕರಣ ಕಾರ್ಯಕ್ರಮ
    • ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ
    • ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಟಿ. ರಘುಮೂರ್ತಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.