Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: 
    ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

    Click Here

    Call us

    Click Here

    ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ವಹಿಸಿದ್ದರು.

    ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಿರಂತರ ಪ್ರಯತ್ನ ಯಶಸ್ಸಿಗೆ ದಾರಿ. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ನಿರಂತರ ಪ್ರಯತ್ನ ಮತ್ತು ಕಾಯುವ ತಾಳ್ಮೆ ಇರಬೇಕು. ಶಿಕ್ಷಣ ಕೇವಲ ಪುಸ್ತಕದ ಜ್ಞಾನವಲ್ಲ, ಬದಲಿಗೆ ಜೀವನದ ಏಳು-ಬೀಳುಗಳನ್ನು ಎದುರಿಸುವ ಧೈರ್ಯ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಮತ್ತು ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕಲಿಸುವಂತಿರಬೇಕು ಎಂದರು.

    ಅತಿಥಿಯಾಗಿ ಭಾಗವಹಿಸಿದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ  ಪ್ರಾಂಶುಪಾಲರಾದ ಡಾ.ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಹೆತ್ತವರು ತಮ್ಮ ಮಕ್ಕಳಿಗೆ ಸದ್ವಿಚಾರ, ಸಂಸ್ಕೃತಿ, ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತ್ತರಾಗಬೇಕು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನು  ನೀಡಿದರು.

    ಈ ಸಂದರ್ಭದಲ್ಲಿ 2025- 26 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ  ರ್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದೊಂದಿಗೆ ಬೆಳ್ಳಿಲೋಟ, ಬೆಳ್ಳಿ ನಾಣ್ಯ, ಫಲ ಪುಷ್ಪವನ್ನು ನೀಡಿ ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಪ್ರಸಕ್ತ ಶೈಕ್ಷಣಿಕ ಸಾಲಿನ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರು ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು.

    ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಯವರಾದ ರಾಧಾಕೃಷ್ಣ ಶೆಣೈ, ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಸನ್ಮಾನಿತರ ಪಟ್ಟಿಯನ್ನು ಅರ್ಥಶಾಸ್ತ್ರ  ಉಪನ್ಯಾಸಕ ಮಂಜುನಾಥ್  ಹಾಗೂ ಆಂಗ್ಲ ಭಾಷಾ ಉಪನ್ಯಾಸಕಿ ಅಮೃತಾ ವಾಚಿಸಿದರು, ಇಂಗ್ಲೀಷ್  ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಹಾಗೂ ಕನ್ನಡ ಉಪನ್ಯಾಸಕ ಸುಧೀರ್ ಅತಿಥಿಗಳನ್ನು ಪರಿಚಯಿಸಿದರು. ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್‌ ಸ್ವಾಗತಿಸಿದರು, ಭೌತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಭರತ್ ಚಂದ್ರ ಕೆ. ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿವಿಧ ಸಂಘ-ಸಂಸ್ಥೆಗಳಿಂದ ಕೋಟತಟ್ಟು ಕೊರಗ ಕಾಲೋನಿಯ 7 ಮನೆಗಳಿಗೆ ಗೋದ್ರೇಜ್ ಕೊಡುಗೆ

    28/05/2026

    ಜೂನ್‌ 2ರಂದು ಕೋಟ – ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ

    28/05/2026

    ಜಾನಪದ ನೃತ್ಯ ವಿಭಾಗದಲ್ಲಿ ಶಿಕ್ಷಕ ಗುರುಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    28/05/2026
    Leave A Reply Cancel Reply

    ten + six =

    Call us

    Click Here

    Call us

    Call us

    Call us
    Highest Viewed Recently
    • ವಿವಿಧ ಸಂಘ-ಸಂಸ್ಥೆಗಳಿಂದ ಕೋಟತಟ್ಟು ಕೊರಗ ಕಾಲೋನಿಯ 7 ಮನೆಗಳಿಗೆ ಗೋದ್ರೇಜ್ ಕೊಡುಗೆ
    • ಜೂನ್‌ 2ರಂದು ಕೋಟ – ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ
    • ಜಾನಪದ ನೃತ್ಯ ವಿಭಾಗದಲ್ಲಿ ಶಿಕ್ಷಕ ಗುರುಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ
    • ಹೆನ್ನಾಬೈಲ್ ಈದ್ಗಾ ಮಸೀದಿಯಲ್ಲಿ ಬಕ್ರೀದ್ ಸಂಭ್ರಮ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.