ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್, ಮ್ಯಾನೇಜ್‌ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ಕುಂದಾಪುರದ ಕೋಸ್ಟಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (ಕೋಸ್ಟಲ್ ಕ್ಯಾಶ್ಯೂಸ್) ಸಂಸ್ಥೆಗೆ ಭೇಟಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ವಿನೋದ್ ಅವರು ಗೋಡಂಬಿ ಬೀಜಗಳ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಗೋಡಂಬಿ ಬೀಜಗಳನ್ನು ಎಲ್ಲಿಂದ ಸಂಗ್ರಹಿಸಲಾಗುತ್ತದೆ, ಅವುಗಳನ್ನು ವಿವಿಧ ಹಂತಗಳ ಸಂಸ್ಕರಣೆಗೆ ಹೇಗೆ ಒಳಪಡಿಸಲಾಗುತ್ತದೆ, ಗುಣಮಟ್ಟದ ಆಧಾರದ ಮೇಲೆ ಹೇಗೆ ವಿಂಗಡಿಸಲಾಗುತ್ತದೆ ಹಾಗೂ ಅಂತಿಮವಾಗಿ ಉತ್ತಮ ಗುಣಮಟ್ಟದ ಉತ್ಪನ್ನವಾಗಿ ಹೇಗೆ ತಯಾರಿಸಲಾಗುತ್ತದೆ ಎಂಬುದನ್ನು ವಿವರಿಸಿದರು.
ಈ ಕೈಗಾರಿಕಾ ಭೇಟಿಯಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೀತಿ ಹೆಗ್ಡೆ, ಸತೀಶ್ ಶೆಟ್ಟಿ, ರಜತ್ ಬಂಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










