ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರಥಬೀದಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ಮೆಗಾ ಶಿಕ್ಷಕ, ಪೋಷಕ ಸಭೆ ಎಸ್‌ಡಿಎಂಸಿ ಅಧ್ಯಕ್ಷೆ ಶೋಭಾ ಖಾರ್ವಿ ಉಪಸ್ಥಿತಿಯಲ್ಲಿ ಸೋಮವಾರ ನಡೆಯಿತು.
ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಹೊಸತಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಹೂ ಮತ್ತು ಬಲೂನ್‌ನ್ನು ನೀಡಿ ಸ್ವಾಗತಿಸಲಾಯಿತು. ಸರಕಾರದಿಂದ ನೀಡಲ್ಪಟ್ಟ ಉಚಿತ ಪಠ್ಯಪುಸ್ತಕವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ವೇತ ವಿಶ್ವನಾಥ್ ಖಾರ್ವಿ, ಶಿಕ್ಷಕರು ಹಾಗೂ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ ಸ್ವಾಗತಿಸಿ, ಸಹಶಿಕ್ಷಕಿ ಪ್ರೇಮಲತಾ ಕಾರ್ಯಕ್ರಮವನ್ನು ನಿರೂಪಿಸಿದರು.










