Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ
    ಊರ್ಮನೆ ಸಮಾಚಾರ

    ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು ರಿ., ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10 ರ ತನಕ ನಡೆಯಲಿದೆ.

    Click Here

    Call us

    Click Here

    ಇದರ ಸಮಾರೋಪ ಸಮಾರಂಭವು ಜೂನ್ 10 ಬುಧವಾರದಂದು ಸಂಜೆ ಗಂಟೆ 5.00 ಕ್ಕೆ ನಡೆಯಲಿದ್ದು ಗಡಿನಾಡು ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ  35ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಯಶಸ್ವಿಯಾಗಿ ಪೂರೈಸಿರುವುದಕ್ಕಾಗಿ, ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಕರ್ನಾಟಕ ಗಡಿನಾಡು ಸಂಘಟನಾಗಾರರಾಗಿ 35 ವರ್ಷದ ಸೇವೆಗಾಗಿ ಪ್ರತಿಷ್ಠಿತ  ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

    ಈ ಪ್ರಶಸ್ತಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಡಾ. ಸಿ. ಸೋಮಶೇಖರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ವೈ.ಕೆ.ಮುದ್ದುಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ.ಮನು ಬಳಿಗಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ,ಶ್ರೀಮತಿ ಮಧುರ ಅಶೋಕ ಕುಮಾರ್ ಬೆಂಗಳೂರು, ಖ್ಯಾತ ಚಲನಚಿತ್ರ ನಟ ನಾಟಕಕಾರ ಮುಖ್ಯಮಂತ್ರಿ ಚಂದ್ರು ಭಾಗವಹಿಸಲಿದ್ದಾರೆ. ವಿ.ಕೆ.ಎಂ ಕಲಾವಿದರು ರಿ., ಬೆಂಗಳೂರು ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಸಿ.ಎಂ. ತಿಮ್ಮಯ್ಯ ಉಪಸ್ಥಿತರಿರುತ್ತಾರೆ.

    ಶಿವರಾಮ ಕಾಸರಗೋಡು ಸ್ಥಾಪಕ ಅಧ್ಯಕ್ಷರಾಗಿ 1990 ರಲ್ಲಿ ಸ್ಥಾಪನೆಗೊಂಡ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ.,ಕಾಸರಗೋಡು ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ,ಬೆಂಗಳೂರು, ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಹಯೋಗದಲ್ಲಿ ಕೇರಳ  ರಾಜ್ಯ ಕನ್ನಡ ಸಮ್ಮೇಳನ ಮತ್ತು ಕೇರಳ- ಕರ್ನಾಟಕ ಉತ್ಸವವನ್ನು 7 ಬಾರಿ ಹಮ್ಮಿಕೊಳ್ಳಲಾಗಿದೆ.

    ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕಾಸರಗೋಡು ಜಿಲ್ಲಾ -ಘಟಕ ರೂಪೀಕರಣವಾದಾಗ ಅದರ ಅಧ್ಯಕ್ಷರಾಗಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನವನ್ನು 7 ಬಾರಿ ಸಂಘಟಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ  ಅದರ ಅಧ್ಯಕ್ಷರಾದ ಪ್ರಾರಂಭದ ಅವಧಿಯಲ್ಲಿ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಾಸರಗೋಡು ಗ್ರಾಮದಲ್ಲಿ ನಡೆಸಿದ್ದರು. ಕೇರಳ ರಾಜ್ಯ ದಾಸ ಸಾಹಿತ್ಯ ಪರಿಷತ್ತು ಸ್ಥಾಪಕ ಅಧ್ಯಕ್ಷರಾಗಿ 2 ಬಾರಿ ಕೇರಳ ರಾಜ್ಯ ದಾಸ ಸಾಹಿತ್ಯ ಸಮ್ಮೇಳನ – ಕೇರಳ ರಾಜ್ಯ ಭಜನಾ ಸಂಘಟನೆಗಳ ಸಮಾವೇಶವನ್ನು ಸಂಘಟಿಸಿದ್ದಾರೆ.

    ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯನ್ನು ರೂಪೀಕರಿಸಿ ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮ್ಮೇಳನ,ಸಮಾವೇಶವನ್ನು 4 ಬಾರಿ ಸಂಘಟಿಸಿದ್ದಾರೆ. ಕಾಸರಗೋಡು ಕನ್ನಡಿಗರ ಹಿತರಕ್ಷಣೆ,ಮಹಾಜನ ಆಯೋಗದ ವರದಿ ಜ್ಯಾರಿಗಾಗಿ ಹಿರಿಯರೊಂದಿಗೆ ಹಲವು ಸಮ್ಮೇಳನ, ಸಮಾವೇಶ ಸಮಿತಿಯ ಪ್ರಧಾನ ಕಾರ್ಯದರ್ಶಿ, ಸಂಘಟರಾಗಿ ದುಡಿದಿದ್ದಾರೆ. ಕಾಸರಗೋಡು ವಿಲೀನೀಕರಣಕ್ಕಾಗಿ ಕಾಸರಗೋಡು ಬೆಂಗಳೂರು ಮಂಗಳೂರಿನಲ್ಲಿ ಸಮಾವೇಶ ಸಂಘಟಿಸಿದ್ದಾರೆ.

    1985 ಜುಲೈ 1ರಂದು ಕಾಸರಗೋಡು ಜಿಲ್ಲಾ(ದಕ್ಷಿಣ  ಕನ್ನಡ ಜಿಲ್ಲಾ ) ಫ್ರೀಲಾನ್ಸ್ ಪತ್ರಕರ್ತರ ಸಂಘದ ಸಂಸ್ಥಾಪಕ  ಅಧ್ಯಕ್ಷರಾಗಿದ್ದು, ನಿರಂತರ ಕನ್ನಡ ಪತ್ರಿಕಾ ಮಾಧ್ಯಮದೊಂದಿಗೆ ಸಂಪರ್ಕದಲ್ಲಿದ್ದಾರೆ. ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಆಯೋಜಿಸಿರುವ  ಹೊರನಾಡ ಕನ್ನಡಿಗರ ರಾಷ್ಟ್ರೀಯ ಸಮಾವೇಶದಲ್ಲಿ ಬೆಂಗಳೂರು, ನವದೆಹಲಿ, ಮುಂಬೈ,ಗೋವಾದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದು, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರಾವಾಡ ಸಂಘಟಿಸುತ್ತಿರುವ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ 9 ಮಹಾ ಮೇಳದಲ್ಲಿ ಆಹ್ವಾನಿತರಾಗಿ  ಪಾಲ್ಗೊಂಡಿದ್ದಾರೆ.

     2023ರಲ್ಲಿ ನಡೆದ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಆಹ್ವಾನಿತರಾಗಿ ಭಾಗವಹಿಸಿದ್ದಾರೆ ಗಲ್ಫ್ ರಾಷ್ಟ್ರದ ದುಬೈ,ಶಾರ್ಜಾಕ್ಕೆ 3 ಬಾರಿ ಅತಿಥಿಗಳಾಗಿ, ವಿಶೇಷ ಆಮಂತ್ರಿತರಾಗಿ ಪಾಲ್ಗೊಂಡಿದ್ದಾರೆ.ಫ್ರೀಲಾನ್ಸ್ ಪತ್ರಕರ್ತರಾಗಿ,ಲೇಖಕರಾಗಿ, ಬರಹಗಾರರಾಗಿ ಹಲವು ಕೃತಿಗಳನ್ನು ಸಂಪಾದಿಸಿದ್ದಾರೆ.

    ಕಾಸರಗೋಡು ಕನ್ನಡ ಗ್ರಾಮದಲ್ಲಿ ಕೇರಳ –  ಕರ್ನಾಟಕ ಭವನ ಸಾಂಸ್ಕೃತಿಕ ಸಮುಚ್ಚಯದ ನಿರ್ಮಾಣಕ್ಕೆ 6 ಕೋಟಿ ರೂಪಾಯಿಗಳ ಯೋಜನೆ ಸಿದ್ಧವಾಗುತ್ತಿದೆ. ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಕಾಸರಗೋಡು ಗೋ-ಕುಟೀರ, ಕಾಮದೇನು- ಕಲ್ಪವೃಕ್ಷ ಗೋ – ವಿಶ್ರಾಂತಿ ಗೃಹವು ಉದ್ಘಾಟನೆಯ ಹಂತದಲ್ಲಿದೆ. ಈಗಾಗಲೇ 25 ಲಕ್ಷರೂಪಾಯಿ ವೆಚ್ಚದಲ್ಲಿ 200 ಮಂದಿ ಕುಳಿತುಕೊಂಡು ಕಾರ್ಯಕ್ರಮ ವೀಕ್ಷಿಸಲು ಅವಕಾಶವಿರುವ ಸಾಂಸ್ಕೃತಿಕ ಭವನ, ಬಯಲು ರಂಗಮಂಟಪ, ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ, ಭಜನಾ ಸಂಕೀರ್ತನಾ ಕುಟೀರ, ನಮ್ಮ ಮನೆ ವಿಶ್ರಾಂತಿ ಗೃಹ – ರೆಸ್ಟ್ ಹೌಸ್ ನಿರ್ಮಾಣವಾಗಿದೆ.

    ಸಂಪರ್ಕ :- ಶಿವರಾಮ ಕಾಸರಗೋಡು ಕನ್ನಡ ಗ್ರಾಮ, ಕಾಸರಗೋಡು -671121,
    ಮೊಬೈಲ್ :- 9448572016

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ

    03/06/2026

    ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಆಧ್ಯಾತ್ಮಿಕ ಜಾಗೃತಿ ಶಿಬಿರ 

    03/06/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ

    03/06/2026
    Leave A Reply Cancel Reply

    nineteen − one =

    Call us

    Click Here

    Call us

    Call us

    Call us
    Highest Viewed Recently
    • ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ
    • ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಆಧ್ಯಾತ್ಮಿಕ ಜಾಗೃತಿ ಶಿಬಿರ 
    • ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ
    • ಬೈಕಿಗೆ ಹಿಂದಿನಿಂದ ಡಿಕ್ಕಿಯಾದ ಕಾರು. ಬೈಕ್‌ ಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.