ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಡಿ “ಸರ್ವರಿಗೂ ಸೂರು” ಒದಗಿಸಲು 2024 ರ ಸೆಪ್ಟಂಬರ್ 01 ರಿಂದ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು.
ಯೋಜನೆಯಡಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ Unified Web Portal ನಲ್ಲಿಯೂ ಸಹ ಫಲಾನುಭವಿಗಳು ಸ್ವ-ಇಚ್ಛೆಯಿಂದ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಸೇವಾ ಸಿಂದು ಮತ್ತು ಗ್ರಾಮ-1 ಮೂಲಕ ವೆಬ್‌ಸೈಟ್ https://pmay-urban.gov.in ನಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:
ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ ತಾಯಿ/ಮತ್ತು ಪಡಿತರ ಚೀಟಿಯಲ್ಲಿ ಇರುವಂತ ಕುಟುಂಬ ಸದಸ್ಯರ ಆಧಾರ್ ಕಾರ್ಡ್) ಪ್ರತಿಗಳು, ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬAದಿಸಿದ ದಾಖಲೆಗಳು (ಹಕ್ಕುಪತ್ರ/ಕ್ರಯಪತ್ರ/ದಾನಪತ್ರ/ಉಡುಗೊರೆ ಪತ್ರ/ಖಾತಾ), ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಸೆಲ್ಫ್ ಡಿಕ್ಲರೇಷನ್ ಫಾರ್ಮ್, ಮೊಬೈಲ್ ಸಂಖ್ಯೆ ಹಾಗೂ ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ).
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವಸತಿ ಶಾಖೆಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕಾಪು ಪುರಸಭೆ ಮುಖ್ಯಾಧಿಖಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.










