Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿವೃತ್ತ ಶಿಕ್ಷಕ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ನಿಧನ
    ಊರ್ಮನೆ ಸಮಾಚಾರ

    ನಿವೃತ್ತ ಶಿಕ್ಷಕ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ನಿಧನ

    Updated:06/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನಿವೃತ್ತ ಶಿಕ್ಷಕ, ಪತ್ರಕರ್ತ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ, ಮರವಂತೆ ನಿವಾಸಿ ಎಸ್. ಜನಾರ್ದನ ಮರವಂತೆ (88 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

    Click Here

    Call us

    Click Here

    ಎಸ್. ಜನಾರ್ದನ ಮರವಂತೆ ಅವರು ರಾಜ್ಯಶಾಸ್ತ್ರ ಮತ್ತು ಆಂಗ್ಲ ಸಾಹಿತ್ಯದಲ್ಲಿ ಪ್ರತ್ಯೇಕ ಸ್ನಾತಕೋತ್ತರ ಪದವಿ, ಶಿಕ್ಷಣದಲ್ಲಿ ಸ್ನಾತಕ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಆಂಗ್ಲ ಮತ್ತು ವಿದೇಶೀ ಭಾಷೆಗಳ ಅಧ್ಯಯನ ಸಂಸ್ಥೆಯಿಂದ ಆಂಗ್ಲಭಾಷಾ ಬೋಧನೆಯಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪಡೆದಿರುವ ಜನಾರ್ದನರು ಖಂಬದಕೋಣೆ, ಕುಂದಾಪುರ, ಬೈಂದೂರು, ಶಂಕರನಾರಾಯಣದಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ, ಚಿಕ್ಕಮಗಳೂರಿನ ಸಖರಾಯಪಟ್ಟಣ ಮತ್ತು ನಾವುಂದದಲ್ಲಿ ಉಪನ್ಯಾಸಕರಾಗಿ ದುಡಿದು 1999ರಲ್ಲಿ ನಿವೃತ್ತರಾದರು.

    ಶಿಕ್ಷಕ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಬಳಿಕ ತಮ್ಮ ನಿವೃತ್ತಿಯ ಬದುಕನ್ನು ಜನಾರ್ದನ ಮರವಂತೆ ಅವರು ಸಕ್ರೀಯವಾಗಿ ಕಳೆದವರು. ರಾಜಕೀಯ, ಸಾಹಿತ್ಯ, ಸಂಘಟನೆಯಲ್ಲಿ ತೊಡಗಿಸಿಕೊಂಡು ಮಾದರಿ ಕಾರ್ಯಗಳ ಮೂಲಕ ಖ್ಯಾತಿ ಗಳಿಸಿದ್ದರು. ಮರವಂತೆ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲಿ ಮರವಂತೆ ಪಂಚಾಯತ್ ಗುರುತಿಸಿಕೊಳ್ಳಲು ಮಹತ್ತರ ಪಾತ್ರ ವಹಿಸಿದ್ದರು. ಅವರು ಕರ್ನಾಟಕ ಗ್ರಾಮ ಸ್ವರಾಜ್ – ಪಂಚಾಯತ್ ರಾಜ್ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ನೂರಾರು ಉಪನ್ಯಾಸಗಳನ್ನು ನೀಡಿದ್ದಾರೆ. ಗ್ರಾಮ ಆಡಳಿತ ಸಂಬಂಧಿ ಮಾರ್ಗದರ್ಶನ ಮಾಡಿದ್ದಾರೆ. ಎರಡೂವರೆ ದಶಕಗಳ ಕಾಲ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡು ಉದಯವಾಣಿ, ಪ್ರಜಾವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಜನಾರ್ದನ ಮರವಂತೆ ಅವರು ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಅಧ್ಯಕ್ಷರಾಗಿದ್ದರು. ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಅವರ ಜನಾಧಿಕಾರ ಪುಸ್ತಕ ನಾಲ್ಕು ಮುದ್ರಣಗಳನ್ನು ಕಂಡಿತ್ತು. ಅವರಿಗೆ ಜಿಲ್ಲಾ ರಾಜ್ಯೋತ್ಸವ, ಸದಾನಂದ ಪ್ರಶಸ್ತಿ, 2021ರಲ್ಲಿ ರಾಜ್ಯ ಸರ್ಕಾರದ ಹಿರಿಯ ನಾಗರಿಕ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. /ಕುಂದಾಪ್ರ ಡಾಟ್ ಕಾಂ/

    ಎಸ್. ಜನಾರ್ದನ ಮರವಂತೆ ಅವರು ಪುತ್ರರಾದ ಟ್ಯಾಕ್ಸ್ ಕನ್ಸ‌ಲ್ಟೆಂಟ್ & ಆಡಿಟರ್ ಆಗಿರುವ ಜತೀಂದ್ರ ಮರವಂತೆ, ಬ್ರಿಸ್ಟಲ್‌ ನಗರದಲ್ಲಿ ಎರೋಸ್ಪೆಸ್ ಇಂಜಿನಿಯರ್ ಆಗಿರುವ ಯೋಗೀಂದ್ರ ಮರವಂತೆ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಕುಟುಂಬಿಕರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

    ಮರವಂತೆಯ ಸಾಧನಾ ಸಮುದಾಯ ಭವನದಲ್ಲಿ ಜೂನ್.07ರ ಭಾನುವಾರ ಬೆಳಿಗ್ಗೆ 08ರಿಂದ ಸಂಜೆ 04ರ ತನಕ ಜನಾರ್ದನ ಮರವಂತೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ

    06/06/2026

    ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ

    06/06/2026

    ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ

    06/06/2026
    Leave A Reply Cancel Reply

    four × four =

    Call us

    Click Here

    Call us

    Call us

    Call us
    Highest Viewed Recently
    • ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ
    • ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ
    • ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ
    • ಉಡುಪಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.