Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
    ಊರ್ಮನೆ ಸಮಾಚಾರ

    ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ರಿ, ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ನಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮ ಉದ್ಘಾಟಿದ ನಿವೃತ್ತ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ನೀಡುವ ಮೂಲಕ ಟ್ರಸ್ಟ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಾಧನೆಗೈದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂಬ ಸಂದೇಶವನ್ನು ಟ್ರಸ್ಟ್ ನೀಡುತ್ತಿದೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸಂಸ್ಥಾಪಕರಾದ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಾತನಾಡಿ, ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಕುಂದಾಪುರ ಕ್ಷೇತ್ರದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು, ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಮಾನಸಿಕವಾಗಿ ಸಹಕಾರಿಯಾಗುವ ಕಾರ್ಯಕ್ರಮಗಳನ್ನು ಯಾವುದೇ ಅಪೇಕ್ಷೆಯಿಲ್ಲದೆ ನೀಡುತ್ತಿರುವುದು ಪ್ರಶಂಸನೀಯ ಎಂದರು.

    ನಿವೃತ್ತ ತೋಟಗಾರಿಕಾ ಇಲಾಖೆ ನಿರ್ದೇಶಕರಾದ ಜಯಶೀಲ ಶೆಟ್ಟಿ ಟ್ರಸ್ಟ್‌ನ ಕಾರ್ಯಚಟುವಟಿಕೆಗಳ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿ, ಪ್ರಾರಂಭದ ದಿನಗಳಿಂದ ಇಂದಿನವರೆಗೂ ಬೇಷರತ್ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಜಯರತ್ನ ಟ್ರಸ್ಟ್ ಇಂದು ಹೆಮ್ಮರವಾಗಿ ಬೆಳೆದು ಸಾವಿರಾರು ಜನರಿಗೆ ನೆರವಾಗುತ್ತಿದ್ದು, ಮೊಳಹಳ್ಳಿ ಗ್ರಾಮಕ್ಕೆ ಕೀರ್ತಿ ತಂದಿದೆ ಎಂದು ಶ್ಲಾಘಿಸಿದರು.

    Click here

    Click here

    Click here

    Click Here

    Call us

    Call us

    ಅತಿಥಿಗಳಾದ ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್ ಕಟ್ಟೆಯ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ಬಿ. ಟ್ರಸ್ಟ್‌ನ ಸಮಾಜಮುಖಿ ಕಾರ್ಯಗಳು ಹಾಗೂ ವಿದ್ಯಾರ್ಥಿಗಳ ಕುರಿತಾದ ವಿಶೇಷ ಕಾಳಜಿ ಸಮಾಜದ ಏಳಿಗೆಗೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು.

    ಉಪಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಟ್ರಸ್ಟ್‌ನಿಂದ ಶಾಲೆಗೆ ದೊರೆತಿರುವ ವಿವಿಧ ಸವಲತ್ತುಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

    ಟ್ರಸ್ಟಿ ಸಂತೋಷ ಕಾಂಚನ್ ಪ್ರಾಸ್ತಾವಿಕವಾಗಿ ಮಾತನಾಡಿ, ಟ್ರಸ್ಟ್ ವತಿಯಿಂದ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇದುವರೆಗೆ ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳು ಮತ್ತು ಕೊಡುಗೆಗಳನ್ನು ವಿವರಿಸಿದರು.

    ಈ ಸಂದರ್ಭದಲ್ಲಿ ಒಟ್ಟು 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಂ ಪೂಜಾರಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರ್ಯಾಂಕ್ ಗಳಿಸಿದ ಮಾನ್ಯ ಅವರಿಗೆ ತಲಾ ₹25,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಅಲ್ಲದೆ, ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕ್ರೀಡಾಪಟು ಗೌರವ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಎಂ. ಮಹೇಶ್ ಹೆಗ್ಡೆ (ಚೇರ್ಮನ್, ಎಕ್ಸಲೆಂಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್), ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಫಲಾನುಭವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಎಂ.ಎನ್. ಸ್ವಾಗತಿಸಿದರು ಹಾಗೂ ಪದವೀಧರ ಶಿಕ್ಷಕರಾದ ಆದರ್ಶ್ ವಂದನಾರ್ಪಣೆ ಮಾಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ

    10/06/2026

    ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    10/06/2026

    ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

    10/06/2026
    Leave A Reply Cancel Reply

    twenty + 6 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ
    • ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.