Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಂ.ಐ.ಟಿ ಕುಂದಾಪುರದ ವಿದ್ಯಾರ್ಥಿನಿಯರಿಂದ ‘ಸ್ಮಾರ್ಟ್ ಹೈಡ್ರೋಪೋನಿಕ್ಸ್’ ತಂತ್ರಜ್ಞಾನ ಆವಿಷ್ಕಾರ. ನಿಖರ ಕೃಷಿಗೆ ಹೊಸ ದಿಕ್ಸೂಚಿ
    ಊರ್ಮನೆ ಸಮಾಚಾರ

    ಎಂ.ಐ.ಟಿ ಕುಂದಾಪುರದ ವಿದ್ಯಾರ್ಥಿನಿಯರಿಂದ ‘ಸ್ಮಾರ್ಟ್ ಹೈಡ್ರೋಪೋನಿಕ್ಸ್’ ತಂತ್ರಜ್ಞಾನ ಆವಿಷ್ಕಾರ. ನಿಖರ ಕೃಷಿಗೆ ಹೊಸ ದಿಕ್ಸೂಚಿ

    Updated:11/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಆಧುನಿಕ ಕೃಷಿ ಪದ್ಧತಿಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಬಲ್ಲ ‘ಐಒಟಿ ಆಧಾರಿತ ಸ್ಮಾರ್ಟ್ ಹೈಡ್ರೋಪೋನಿಕ್ಸ್’ ತಂತ್ರಜ್ಞಾನವನ್ನು ಮೂಡ್ಲಕಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದ್ದಾರೆ.

    Click Here

    Call us

    Click Here

    ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ಫಾತಿಮಾ ತಹಸಿರ್, ಸಿಂಚನಾ ದೇವಾಡಿಗ ಮತ್ತು ವಿನಿತಾ ನಾಯ್ಕ್ ಈ ನೂತನ ಸಂಶೋಧನೆ ಮಾಡಿದ ಪ್ರತಿಭೆಗಳು. ಈ ವಿದ್ಯಾರ್ಥಿನಿಯರು ಸಿದ್ಧಪಡಿಸಿದ ಸಂಶೋಧನಾ ಪ್ರಬಂಧವು ಜಾಗತಿಕ ಮಟ್ಟದ ಪ್ರತಿಷ್ಠಿತ ಸ್ಕೋಪಸ್ ಇಂಡೆಕ್ಸ್ ಮಾನ್ಯತೆ ಹೊಂದಿರುವ “ದಿ ಇಂಟರ್ನ್ಯಾಷನಲ್ ಜರ್ನಲ್ ಆಫ್ ಇನ್ಫರ್ಮ್ಯಾಟಿಕ್ಸ್ ಅಂಡ್ ಕಮ್ಯುನಿಕೇಶನ್ ಟೆಕ್ನಾಲಜಿ”ಯಲ್ಲಿ ಪ್ರಕಟಗೊಂಡಿದೆ.

    ಏನಿದು ಹೈಡ್ರೋಪೋನಿಕ್ಸ್?
    ಮಣ್ಣಿಲ್ಲದೆ ಕೇವಲ ಪೋಷಕಾಂಶಯುಕ್ತ ನೀರನ್ನು ಬಳಸಿ ಗಿಡಗಳನ್ನು ಬೆಳೆಸುವ ಪದ್ಧತಿಯೇ ಹೈಡ್ರೋಪೋನಿಕ್ಸ್. ವಿದ್ಯಾರ್ಥಿನಿಯರು ಅಭಿವೃದ್ಧಿಪಡಿಸಿರುವ ಈ ವ್ಯವಸ್ಥೆಯು ನ್ಯೂಟ್ರಿಯೆಂಟ್ ಫಿಲ್ಮ್ ಟೆಕ್ನಿಕ್ (NFT) ಅನ್ನು ಬಳಸುತ್ತದೆ. ಅಂದರೆ, ಗಿಡಗಳ ಬೇರುಗಳಿಗೆ ನಿರಂತರವಾಗಿ ಪೋಷಕಾಂಶ ಭರಿತ ನೀರು ತೆಳುವಾದ ಪದರದಂತೆ ಹರಿಯುವಂತೆ ಮಾಡಲಾಗುತ್ತದೆ. ಇದಕ್ಕೆ ಐಒಟಿ ತಂತ್ರಜ್ಞಾನವನ್ನು ಅಳವಡಿಸಿರುವುದರಿಂದ, ಕೃಷಿಕರು ತಾವಿದ್ದ ಜಾಗದಿಂದಲೇ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಗಿಡಗಳಿಗೆ ಬೇಕಾದ ನೀರಿನ ಪ್ರಮಾಣ, ತಾಪಮಾನ ಮತ್ತು ಪೋಷಕಾಂಶಗಳ ಮಟ್ಟವನ್ನು ನಿಖರವಾಗಿ ನಿಯಂತ್ರಿಸಬಹುದು.

    ವಿದ್ಯಾರ್ಥಿನಿಯರ ಈ ಮಹತ್ವದ ಸಾಧನೆಯನ್ನು ವಿಭಾಗ ಮುಖ್ಯಸ್ಥ ಡಾ. ವರುಣ್ ಕುಮಾರ್ ಹಾಗೂ ಪ್ರೊ. ಅಕ್ಷತಾ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಮಾಡಿರುತ್ತಾರೆ.

    ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ವರ್ಗವು ವಿದ್ಯಾರ್ಥಿನಿಯರ ಈ ಸಾಧನೆಯನ್ನು ಶ್ಲಾಘಿಸಿದ್ದು, ಇವರ ಸಂಶೋಧನೆಯು ಭವಿಷ್ಯದ ಸುಸ್ಥಿರ ಕೃಷಿಗೆ ದೊಡ್ಡ ಕೊಡುಗೆಯಾಗಲಿದೆ ಎಂದು ಆಶಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ

    10/06/2026

    ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

    10/06/2026

    ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    10/06/2026
    Leave A Reply Cancel Reply

    eighteen + 11 =

    Call us

    Click Here

    Call us

    Call us

    Call us
    Highest Viewed Recently
    • ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
    • ಎಂ.ಐ.ಟಿ ಕುಂದಾಪುರದ ವಿದ್ಯಾರ್ಥಿನಿಯರಿಂದ ‘ಸ್ಮಾರ್ಟ್ ಹೈಡ್ರೋಪೋನಿಕ್ಸ್’ ತಂತ್ರಜ್ಞಾನ ಆವಿಷ್ಕಾರ. ನಿಖರ ಕೃಷಿಗೆ ಹೊಸ ದಿಕ್ಸೂಚಿ
    • ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ
    • ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.