ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಅಚ್ಲಾಡಿ ಸಮೀಪದ ಮೂಡುಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ನಡೆಯಿತು.

ರೋಟರಿ ಕ್ಲಬ್‌ನ ಸದಸ್ಯ ಭಾಸ್ಕರ್ ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಹಾಯಕ ಗವರ್ನರ್ ಹಾಗೂ ಕ್ಲಬ್‌ನ ಜಿಎಸ್‌ಆರ್ ಚಂದ್ರಶೇಖರ್ ಮೆಂಡನ್, ಮಾತನಾಡಿ, “ಶಿಕ್ಷಣವೇ ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಸಾಧನವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ರೋಟರಿ ಸಂಸ್ಥೆ ಶಿಕ್ಷಣ, ಆರೋಗ್ಯ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳಿಗೆ ಸದಾ ಆದ್ಯತೆ ನೀಡುತ್ತಿದ್ದು, ಇಂತಹ ಸೇವಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ನೆರವಾಗುತ್ತವೆ. ಸಮಾಜದ ಸಹಕಾರದಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ಮುಂದುವರಿಸಲಾಗುವುದು” ಎಂದು ಹೇಳಿದರು.
ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಲಯ ಸೇನಾನಿ ದಯಾನಂದ ಆಚಾರ್, ಬ್ಯಾಗ್ ಪ್ರಾಯೋಜಕರಾದ ಭಾಸ್ಕರ್ ಪೂಜಾರಿ, ಸುರೇಶ್ ಆಚಾರ್, ರವಿನಾಥ್ ಪೂಜಾರಿ, ಪ್ರಥ್ವಿನ್ ಸಿ. ಮೆಂಡನ್, ಪ್ರಕಾಶ್ ಹಂದಟ್ಟು, ಎಲ್‌ಕೆಜಿ ಯುಕೆಜಿ ಕಮಿಟಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ,ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ,ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಆನ್ಸ್ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷೆ ಸಂಧ್ಯಾ ಪ್ರಕಾಶ್, ಶಾಲೆಯ ಶಿಕ್ಷಕಿಯರಾದ ವೀಣಾ ಶೆಟ್ಟಿ, ರಜನಿ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
















