ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವ್ಯಾಪ್ತಿಯಲ್ಲಿ ಬರುವ ಬನ್ನಾಡಿ, ವಡ್ಡರ್ಸೆ ಸೇರಿದಂತೆ ಕೋಟ ಹದಿನಾಲ್ಕು ಗ್ರಾಮಗಳಲ್ಲಿ ವಾಸವಾಗಿರುವ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಗತ್ಯ ಇರುವ ಸಮಾಜ ಬಾಂಧವರು ಅಜಿ೯ಗಳನ್ನು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಕಛೇರಿಯಲ್ಲಿ ಪಡೆದು, ಭತಿ೯ ಮಾಡಿ, ಇದೇ ಆಗಸ್ಟ್ ತಿಂಗಳ 31 ರ ಒಳಗೆ ಶ್ರೀ ದೇವಳದ ಕಛೇರಿಯಲ್ಲಿ ಹಿಂದಿರುಗಿಸುವಂತೆ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880390905 ಇದನ್ನು ಸಂಪರ್ಕಿಸಲು ಕೋರಲಾಗಿದೆ.











