ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.24: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳು, ಪಿಯು ಕಾಲೇಜು, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಜುಲೈ 25ರ ಶನಿವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜು, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರ ಅವರು ಆದೇಶಿಸಿದ್ದಾರೆ.
ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ವಿದ್ಯಾರ್ಥಿಗಳಿಗೆ ರಜೆ ಘೋಷಿಸಿಲ್ಲ ಆದರೆ ಹಾಜರಾತಿ ಕಡ್ಡಾಯವಲ್ಲ. ಸೂಕ್ತ ಮನ್ನೆಚ್ಚರಿಕೆ ವಹಿಸುವಂತೆ ಅವರು ತಿಳಿಸಿದ್ದಾರೆ.











