ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೈಂದೂರಿನ ಹೊಸ ಬಸ್ ನಿಲ್ದಾಣದ ಜಂಕ್ಷನ್ ಬಳಿ ಸಂಭವಿಸಿದೆ.
ಕಳವಾಡಿ ನಿವಾಸಿ ಸುಧಾಕರ ಶೆಟ್ಟಿ (78) ಮೃತಪಟ್ಟ ವ್ಯಕ್ತಿ .
ಅವರು ಒತ್ತಿನೆಣೆ ಕಡೆಯಿಂದ ಬೈಂದೂರು ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ತಕ್ಷಣವೇ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















