ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ಯುವ ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಶೈಕ್ಷಣಿಕ ಮಾನಸಿಕ ದೈಹಿಕ ಆರೋಗ್ಯವನ್ನು ಕಳೆದುಕೊಳ್ಳುತ್ತಿರುವ ಆಘಾತಕಾರಿ ಬೆಳವಣಿಗೆ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದರು.
ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ “ಡ್ರಗ್ಸ್ ಬೇಡ ಬ್ರೋ” ಅಭಿಯಾನ ದಡಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಶಾಮುಕ್ತದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಕವಿತೆ ಎಂ. ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ಬಿನ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಹಾಗೂ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸಾನಿಕ ಹಾಗೂ ನಿಸರ್ಗ ಪ್ರಾರ್ಥನೆಗೈದರು. ಕಾರ್ಯಕ್ರಮದ ಸಮನ್ವಯ ಅಧಿಕಾರಿ, ಉಪನ್ಯಾಸಕ ಪಿ. ಎ. ತೋಮಸ್ ಪ್ರಾಸ್ತಾವಿಕ ಮಾತುಗಳನ್ನಾನಾಡಿದರು.
ಸಂಖ್ಯಾಶಾಸ್ತ್ರ ಉಪನ್ಯಾಸಕಿ ಪ್ರಫುಲ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಸುಗುಣ ವಂದಿಸಿದರು.
















