Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಪಿಯು ಕಾಲೇಜಿನಲ್ಲಿ NATA ತರಬೇತಿ ತರಗತಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಸುಜ್ಞಾನ ಪಿಯು ಕಾಲೇಜಿನಲ್ಲಿ NATA ತರಬೇತಿ ತರಗತಿ ಉದ್ಘಾಟನೆ

    Updated:27/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗದೆ, ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಭವಿಷ್ಯಕ್ಕೆ ದಾರಿ ದೀಪವಾಗುವ ನಿಕಟಪೂರ್ವ ತರಬೇತಿಗಳನ್ನು ಆಯೋಜಿಸುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ‘ನಾಟಾʼ (NATA – National Aptitude Test in Architecture) ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.

    ಶಿಕ್ಷಣ ಎಂಬುದು ಮುಗಿಯದ ಪಯಣ. ನಾವು ಎಷ್ಟೇ ಕಲಿತರೂ ಕಲಿಯುವುದು ಇನ್ನೂ ಇರುತ್ತದೆ. ಇಂದು ಡಿಸೈನ್, ವಾಸ್ತುಶಿಲ್ಪ ಮತ್ತು ಫ್ಯಾಷನ್ ರಂಗಗಳಲ್ಲಿ ಅಪಾರ ಅವಕಾಶಗಳಿವೆ. ವಿದ್ಯಾರ್ಥಿಗಳು ಇಂತಹ ತರಬೇತಿಗಳ ಮೂಲಕ ಸರ್ವತೋಮುಖವಾಗಿ ಸುಸಜ್ಜಿತರಾಗಬೇಕು. ಪಿಯುಸಿ ಹಂತದಲ್ಲೇ ಸಿಗುವ ಈ ರೀತಿಯ ವಿಶೇಷ ತರಬೇತಿಗಳು ನಿಮ್ಮ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ದಾರಿಯಾಗುತ್ತದೆ. ಕಾಲೇಜು ಒದಗಿಸುತ್ತಿರುವ ಈ ಅವಕಾಶವನ್ನು ವಿದ್ಯಾರ್ಥಿಗಳು ಗರಿಷ್ಠ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಂಡು ತಮ್ಮ ನೆಚ್ಚಿನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು” ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಚಂದ್ರಶೇಖರ್ ಶ್ರೀನಿವಾಸ್ ಅವರು, NATA ಪರೀಕ್ಷೆಯ ಸ್ವರೂಪ, ತರಬೇತಿಯ ಅಗತ್ಯತೆ ಹಾಗೂ ವಾಸ್ತುಶಿಲ್ಪ ಕ್ಷೇತ್ರದಲ್ಲಿರುವ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಸುದೀರ್ಘ ಹಾಗೂ ಉಪಯುಕ್ತ ಮಾಹಿತಿ ನೀಡಿದರು.

    ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, “ಪಿಯುಸಿಯ ಈ ಎರಡು ವರ್ಷಗಳು ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ನಿರ್ಣಾಯಕ ಘಟ್ಟ. ಚೆನ್ನಾಗಿ ಅಭ್ಯಾಸ ಮಾಡುವ ಜೊತೆಗೆ, ಸಂಸ್ಥೆ ಆಯೋಜಿಸುವ ಇಂತಹ ಮೌಲ್ಯಯುತ ತರಬೇತಿಗಳ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಿ. ಕೈಗೆ ಸಿಕ್ಕ ಅವಕಾಶಗಳನ್ನು ಎಂದಿಗೂ ಕಳೆದುಕೊಳ್ಳಬೇಡಿ” ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ರಸಾಯನ ಶಾಸ್ತ್ರದ ಉಪನ್ಯಾಸಕ ನಿತಿನ್ ಶೆಟ್ಟಿ ಸ್ವಾಗತಿಸಿದರೆ,ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಶೆಟ್ಟಿ ಉಪಸ್ಥಿತರಿದ್ದರು.

    ಕಾಲೇಜಿನ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ  ಭಾಗವಹಿಸಿ, ತರಬೇತಿಯ ಪ್ರಯೋಜನ ಪಡೆದುಕೊಂಡರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ

    10/09/2026

    ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ

    10/09/2026

    ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    10/09/2026
    Leave A Reply Cancel Reply

    twelve + four =

    Call us

    Click Here

    Call us

    Call us

    Call us
    Highest Viewed Recently
    • ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ
    • ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ
    • ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.