Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ರೂಪುರೇಷೆ
    alvas nudisiri

    ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ರೂಪುರೇಷೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್‌ನ್ನು ಮುಂಬರುವ ವರ್ಷದ ಜನವರಿಯಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.

    Click Here

    Call us

    Click Here

    ಈ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರ ಸ್ವಗೃಹದಲ್ಲಿ ನಡೆದ ಪ್ರಥಮ ಸಮಾಲೋಚನಾ ಸಭೆಯಲ್ಲಿ, ಈ ಬಾರಿ ಆಳ್ವಾಸ್ ನುಡಿಸಿರಿ ಹಾಗೂ ಆಳ್ವಾಸ್ ವಿರಾಸತ್ ಉತ್ಸವಗಳನ್ನು ಒಂದೇ ವೇಳೆಯಲ್ಲಿ  ಅದ್ದೂರಿಯಾಗಿ ಆಯೋಜಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು.

    ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರತಿವರ್ಷವೂ ಹೊಸ ಆಲೋಚನೆ, ಹೊಸ ಪರಿಕಲ್ಪನೆ ಮತ್ತು ಹೊಸ ತಲೆಮಾರಿನ ಭಾಗವಹಿಸುವಿಕೆಗೆ ಆದ್ಯತೆ ನೀಡುತ್ತಾ ಉತ್ಸವವನ್ನು ವಿಸ್ತರಿಸುತ್ತಿದ್ದೇವೆ. ಜನವರಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸುವುದರ ಜೊತೆಗೆ, ಯುವಜನತೆ, ಕನ್ನಡದ ಭವಿಷ್ಯ, ದೇಶೀಯತೆ, ಪರಿಸರ ಸಂರಕ್ಷಣೆ ಹಾಗೂ ಸಹಬಾಳ್ವೆಯಂತಹ ಸಮಕಾಲೀನ ವಿಷಯಗಳ ಕುರಿತು ಗಂಭೀರ ಚರ್ಚೆಗಳಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

    ಸಮಾಜದ ವಿವಿಧ ವರ್ಗಗಳನ್ನು ಒಂದೇ ವೇದಿಕೆಗೆ ತಂದು ಸಂವಾದ, ಸೃಜನಶೀಲತೆ, ಸಂಸ್ಕೃತಿ ಮತ್ತು ಸಾಮಾಜಿಕ ಬದ್ಧತೆಯನ್ನು ಬೆಸೆಯುವ ಸಮಗ್ರ ಉತ್ಸವವಾಗಿ ಆಳ್ವಾಸ್ ನುಡಿಸಿರಿ–ವಿರಾಸತ್‌ನ್ನು ರೂಪಿಸುವ ಸಂಕಲ್ಪ ನಮ್ಮದು ಎಂದರು.

    ಸಭೆಯಲ್ಲಿ ಮಾತನಾಡಿದ ಹಿರಿಯ ಸಾಹಿತಿ ಪಾದೆಕಲ್ಲು ವಿಷ್ಣು ಭಟ್, ಪ್ರಜಾಪ್ರಭುತ್ವದ ಮೌಲ್ಯಗಳು, ಸಹಿಷ್ಣುತೆ ಮತ್ತು ವೈಚಾರಿಕತೆ ಬೆಳೆಸುವ ಚಿಂತನೆಗಳಿಗೆ ಆಳ್ವಾಸ್ ನುಡಿಸಿರಿ ಸದಾ ವೇದಿಕೆಯಾಗಿದೆ. ಸಾಹಿತ್ಯ, ಸಂಸ್ಕೃತಿ ಮತ್ತು ಸಾಮಾಜಿಕ ಪ್ರಜ್ಞೆಯನ್ನು ಬೆಸೆಯುವ ಈ ಉತ್ಸವವು ಸಮಾಜದಲ್ಲಿ ಆರೋಗ್ಯಕರ ಚಿಂತನೆಗೆ ಸದೃಢ ನೆಲೆ ಒದಗಿಸಿದೆ.  ನುಡಿಸಿರಿಗೆ ಭವಿಷ್ಯದ ಕುರಿತು ದೊಡ್ಡ ಕನಸುಗಳಿವೆ. ಆ ಕನಸುಗಳು ಸಾಕಾರಗೊಂಡು, ನುಡಿಸಿರಿ ಮತ್ತಷ್ಟು ಜನಮುಖಿಯಾಗಿ, ಯುವಜನರನ್ನು ಸೆಳೆಯುವ ಸಾಂಸ್ಕೃತಿಕ ಚಳವಳಿಯಾಗಿ ಬೆಳೆಯಬೇಕು ಎಂದರು. ಉತ್ಸವದ ರೂಪುರೇಷೆಗಳನ್ನು ಶ್ಲಾಘಿಸಿದ ಅವರು, ಕಾಲದ ಅಗತ್ಯಗಳಿಗೆ ಅನುಗುಣವಾಗಿ ಹೊಸ ವಿಚಾರಗಳು, ಹೊಸ ತಲೆಮಾರಿನ ಭಾಗವಹಿಸುವಿಕೆ ಮತ್ತು ಸಮಾಜಮುಖಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ನುಡಿಸಿರಿ ಮತ್ತಷ್ಟು ಅರ್ಥಪೂರ್ಣವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಮಾತನಾಡಿದ  ಪ್ರಾಧ್ಯಪಕ ಡಾ. ಧನಂಜಯ ಕುಂಬ್ಳೆ, ಡಾ. ಎಂ. ಮೋಹನ ಆಳ್ವರು ಶಿಕ್ಷಣತಜ್ಞರಷ್ಟೇ ಅಲ್ಲ, ಸಮಾಜದ ಸಾಂಸ್ಕೃತಿಕ ಪ್ರಜ್ಞೆಯನ್ನು ರೂಪಿಸಿದ ದೂರದೃಷ್ಟಿಯ ನಾಯಕ. ನುಡಿಸಿರಿಯಂತಹ ಮಹತ್ವದ ಸಾಹಿತ್ಯಿಕ  ಕರ‍್ಯಕ್ರಮದ ಮೂಲಕ ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಅಪೂರ್ವ ಕಾರ್ಯವನ್ನು ಅವರು ನಿರಂತರವಾಗಿ ಮಾಡುತ್ತಿದ್ದಾರೆ. ಯುವಜನರಲ್ಲಿ ಕನ್ನಡದ ಬಗ್ಗೆ ಅಭಿಮಾನ, ಸಂಸ್ಕೃತಿಯ ಬಗ್ಗೆ ಗೌರವ ಮತ್ತು ಸಮಾಜಮುಖಿ ಚಿಂತನೆಗಳನ್ನು ಬೆಳೆಸುವಲ್ಲಿ ಡಾ. ಆಳ್ವರ ಕೊಡುಗೆ ಅನನ್ಯವಾದುದು.  ಈ ಬಾರಿಯ ನುಡಿಸಿರಿ–ವಿರಾಸತ್ ಇನ್ನಷ್ಟು ವೈವಿಧ್ಯಮಯವಾಗಿ, ಯಶಸ್ವಿಯಾಗಿ ನಡೆಯಲಿ ಆಶಿಸಿದರು.  

    ಸಭೆಯಲ್ಲಿ ನುಡಿಸಿರಿಯ ಪರಿಕಲ್ಪನೆ, ಸರ್ವಾಧ್ಯಕ್ಷರ ಆಯ್ಕೆ, ಉದ್ಘಾಟಕರ ಹೆಸರುಗಳು, ವಿವಿಧ ಗೋಷ್ಠಿಗಳ ವಿಷಯಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ, ವಿಶೇಷೋಪನ್ಯಾಸಗಳ ವಿಷಯ ಮತ್ತು ಉಪನ್ಯಾಸಕರ ಪಟ್ಟಿ, ನುಡಿಸಿರಿ ಪ್ರಶಸ್ತಿಗೆ ಅರ್ಹರ ಹೆಸರುಗಳು ಹಾಗೂ ವಿವಿಧ ವೇದಿಕೆಗಳಿಗೆ ನಾಮಕರಣ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಉತ್ಸವವನ್ನು ಇನ್ನಷ್ಟು ಅರ್ಥಪೂರ್ಣ, ವೈವಿಧ್ಯಮಯ ಹಾಗೂ ಜನಸಾಮಾನ್ಯರ ಭಾಗವಹಿಸುವಿಕೆಗೆ ಉತ್ತೇಜನ ನೀಡುವ ರೀತಿಯಲ್ಲಿ ಆಯೋಜಿಸುವ ಬಗ್ಗೆ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

    ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಕ್ಷೇತ್ರಗಳ ಗಣ್ಯರು  ಕರ‍್ಯಕ್ರಮದ ಗುಣಮಟ್ಟವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡಿದರು.

    ವೇದಿಕೆಯಲ್ಲಿ ಪ್ರಮುಖರಾದ ಡಾ. ಎಂ. ಪಿ. ಶ್ರೀನಾಥ್, ಬಾಲಕೃಷ್ಣ ಶೆಟ್ಟಿ, ತುಕಾರಾಮ್ ಪೂಜಾರಿ, ಶಕುಂತಲಾ ಶೆಟ್ಟಿ, ಸತ್ಯನಾರಾಯಣ ಮಲ್ಲಿಪಟ್ಣ, ವೇಣುಗೋಪಾಲ ಶೆಟ್ಟಿ ಇದ್ದರು.  ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ  ಕರ‍್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಪಿಯು ಕಾಲೇಜಿನಲ್ಲಿ NATA ತರಬೇತಿ ತರಗತಿ ಉದ್ಘಾಟನೆ

    27/07/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ʼಡ್ರಗ್ಸ್ ಬೇಡ ಬ್ರೋʼ ಅಭಿಯಾನ

    25/07/2026

    ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

    24/07/2026
    Leave A Reply Cancel Reply

    8 + thirteen =

    Call us

    Click Here

    Call us

    Call us

    Call us
    Highest Viewed Recently
    • ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ರೂಪುರೇಷೆ
    • ಪಕ್ಷ ಸಂಘಟನೆ, ಯುವ ಸಮುದಾಯದೊಂದಿಗೆ ಕಾಂಗ್ರೆಸ್: ಕೆ. ಜಯಪ್ರಕಾಶ್ ಹೆಗ್ಡೆ
    • ವಂಡ್ಸೆ ಶಾಲೆಗೆ ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆಎಸ್‌ಎಸ್ ಮಹಾವಿದ್ಯಾಪೀಠದ ಅಧಿಕಾರಿಗಳು ಭೇಟಿ
    • ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ 14ನೇ ವರ್ಷದ ಟ್ರಸ್ಟ್ ದಿನಾಚರಣೆ  
    • ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.