ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪ್ರಧಾನಿ ನರೇಂದ್ರ ಮೋದಿ ಅವರ 136ನೇ “ಮನ್ ಕೀ ಬಾತ್” ಕಾರ್ಯಕ್ರಮದ ನೇರ ಪ್ರಸಾರವನ್ನು ಭಾನುವಾರ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿಯಲ್ಲಿ ಸಾಮೂಹಿಕವಾಗಿ ವೀಕ್ಷಿಸಲಾಯಿತು.

ಮನ್ ಕೀ ಬಾತ್ ಮೂಲಕ ಪ್ರಧಾನಿಯವರು ದೇಶದ ಮೂಲೆ ಮೂಲೆಗಳಲ್ಲಿನ ಸಕಾರಾತ್ಮಕ ಬದಲಾವಣೆಗಳನ್ನು ಜನರೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಇದು ನಮ್ಮ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮತ್ತು ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎಸ್ ಅವರು ಮನ್ ಕೀ ಬಾತ್ ವೀಕ್ಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಧಾನಿಯವರು ದೇಶದ ವಿವಿಧ ಕ್ಷೇತ್ರಗಳ ಸಾಧನೆಗಳು, ಜನಸಾಮಾನ್ಯರ ಕಥೆಗಳು ಮತ್ತು ರಾಷ್ಟ್ರ ನಿರ್ಮಾಣದ ಕುರಿತು ನೀಡಿದ ಸಂದೇಶವನ್ನು ಕಾರ್ಯಕರ್ತರು ಮತ್ತು ಸಾರ್ವಜನಿಕರು ಗಮನವಿಟ್ಟು ಆಲಿಸಿದರು.
ಈ ಸಂದರ್ಭದಲ್ಲಿಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ಹಾಗೂ ಮಂಡಲ, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಪದಾಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
















