ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾದೀವಿಗೆ ಯೋಜನೆಗಳ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.
ಉಪ್ಪುಂದ ಜೆಸಿಐ ಸಂಸ್ಥೆಯ ಅಧ್ಯಕ್ಷರಾಗಿ, ಬೈಂದೂರು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಇವರು ಬೈಂದೂರು ಉತ್ಸವ, ಕುಂದಾಪುರ ಕನ್ನಡ ಪ್ರತಿಷ್ಠಾನ ಮೊದಲಾದ ಕಾರ್ಯಕ್ರಮಗಳ ಸಂಯೋಜಕರಾಗಿಯೂ ಕೆಲಸ ಮಾಡಿದ್ದಾರೆ.
ಪ್ರಸ್ತುತ ಬೈಂದೂರು ಬಂಟರ ಯಾನೆ ನಾಡವರ ಸಂಘದ ಯುವ ವೇದಿಕೆಯ ಸಂಚಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜುಲೈ 31 ಕಡೆಯ ದಿನ:
2026ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ಬಂಟ ಸಮುದಾಯದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಯೋಜನೆಗೆ ಹಾಗೂ 60%ಕ್ಕಿಂತ ಅಧಿಕ ಅಂಕ ಪಡೆದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿದ್ಯಾದೀವಿಗೆ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ ಎಂಬುದಾಗಿ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















