Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಪಿಯು ಕಾಲೇಜಿನಲ್ಲಿ ಕೃಷಿ, ಪಶುವೈದ್ಯಕೀಯ ವಿಜ್ಞಾನ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಸುಜ್ಞಾನ ಪಿಯು ಕಾಲೇಜಿನಲ್ಲಿ ಕೃಷಿ, ಪಶುವೈದ್ಯಕೀಯ ವಿಜ್ಞಾನ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಬಿ.ಎಸ್ಸಿ ‘ಕೃಷಿ ಮತ್ತು ಪಶುವೈದ್ಯಕೀಯ ವಿಜ್ಞಾನʼ ಕೋರ್ಸ್‌ಗಳ ಭವಿಷ್ಯ ಹಾಗೂ ಉದ್ಯೋಗಾವಕಾಶಗಳ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಹೆಸರಾಂತ ಕೃಷಿ ಶಿಕ್ಷಣ ತಜ್ಞ ರಾಜು ಬೆಳ್ಳುಂಡಗಿ ಅವರು ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪ್ರಾಣಿ ವಿಜ್ಞಾನ (Farm Science) ಕ್ಷೇತ್ರದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು.

    “ಹಿಂದಿನ ದಿನಗಳಲ್ಲಿ ಬಿ.ಎಸ್ಸಿ ಕೃಷಿ ಅಥವಾ ಪಶುವೈದ್ಯಕೀಯ ಶಿಕ್ಷಣದ ಕಡೆಗೆ ಹೆಚ್ಚಿನ ವಿದ್ಯಾರ್ಥಿಗಳು ಗಮನ ಹರಿಸುತ್ತಿರಲಿಲ್ಲ ಹಾಗೂ ಸ್ಪರ್ಧೆಯೂ ಕಡಿಮೆಯಿತ್ತು. ಆದರೆ, ಇಂದಿನ ಬದಲಾದ ಯುಗದಲ್ಲಿ ಈ ‘ಫಾರ್ಮ್ ಸೈನ್ಸ್’ ಕ್ಷೇತ್ರವು ಅತ್ಯಂತ ಶರವೇಗದಲ್ಲಿ ಬೆಳೆಯುತ್ತಿದೆ. ವೈಜ್ಞಾನಿಕ ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳು ಬಂದಿರುವುದರಿಂದ ಕೋರ್ಸ್ ಮುಗಿಸಿದ ತಕ್ಷಣ ಹೇರಳ ಉದ್ಯೋಗಾವಕಾಶಗಳು ಲಭ್ಯವಿವೆ. ನಿರಂತರ ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ನಡೆಸಿದರೆ ಈ ರಂಗದಲ್ಲಿ ಅತ್ಯುನ್ನತ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ,” ಎಂದು ವಿವರಿಸಿದರು.

    ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರಾದ ದುಷ್ಯಂತ ಭಾರದ್ವಾಜ್ ಧನ್ಯವಾದ ಸಮರ್ಪಿಸಿದರು.

    ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ತಮ್ಮ ಮುಂದಿನ ಶೈಕ್ಷಣಿಕ ಭವಿಷ್ಯದ ಕೋರ್ಸುಗಳ ಕುರಿತು ಉಪಯುಕ್ತ ಮಾಹಿತಿ ಪಡೆದುಕೊಂಡರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಲ್ತೋಡು: ಕೆಂಪು ಕಲ್ಲು ಕ್ವಾರೆಯಲ್ಲಿ ಬಿದ್ದು ವ್ಯಕ್ತಿ ಸಾವು

    28/07/2026

    ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

    28/07/2026

    ರಿಯಾಕ್ಟ್ ಜೆಎಸ್ ಪ್ರಮಾಣೀಕೃತ ತರಬೇತಿಯಿಂದ ಐಎಂಜೆಐಎಸ್‌ಸಿ ವಿದ್ಯಾರ್ಥಿಗಳ ಪ್ಲೇಸ್‌ಮೆಂಟ್ ಸಿದ್ಧತೆ ಬಲ

    28/07/2026
    Leave A Reply Cancel Reply

    five + 8 =

    Call us

    Click Here

    Call us

    Call us

    Call us
    Highest Viewed Recently
    • ಕಾಲ್ತೋಡು: ಕೆಂಪು ಕಲ್ಲು ಕ್ವಾರೆಯಲ್ಲಿ ಬಿದ್ದು ವ್ಯಕ್ತಿ ಸಾವು
    • ಸುಜ್ಞಾನ ಪಿಯು ಕಾಲೇಜಿನಲ್ಲಿ ಕೃಷಿ, ಪಶುವೈದ್ಯಕೀಯ ವಿಜ್ಞಾನ ಕಾರ್ಯಾಗಾರ
    • ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ
    • ರಿಯಾಕ್ಟ್ ಜೆಎಸ್ ಪ್ರಮಾಣೀಕೃತ ತರಬೇತಿಯಿಂದ ಐಎಂಜೆಐಎಸ್‌ಸಿ ವಿದ್ಯಾರ್ಥಿಗಳ ಪ್ಲೇಸ್‌ಮೆಂಟ್ ಸಿದ್ಧತೆ ಬಲ
    • ಕುಂದಾಪುರ: ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.