ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಜಿಲ್ಲಾಡಳಿತ ಸಹಯೋಗದೊಂದಿಗೆ ಹಾಗೂ ಜೆಸಿಐ ಶಿರೂರು ಘಟಕ ಇದರ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರೂರುಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ಜರುಗಿತು.
ಶಿರೂರು ಜೆಸಿಐ ಅಧ್ಯಕ್ಷ ವಿನೋದ ಮೇಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ದೇವೇಂದ್ರ ಕೆ. ಮೊಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಜೆಸಿಐ ಕಾರ್ಯದರ್ಶಿ ಪವನ್ ಪೂಜಾರಿ, ಶಾಲೆಯ ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಕಾಲೇಜಿನ ಉಪಪ್ರಾಂಶುಪಾಲೆ ಜಯಂತಿ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೋಡಲ್ ಅಧಿಕಾರಿ ಶ್ರೀದೇವಿ ನಿರೂಪಿಸಿದರು. ಆರತಿ ವಂದಿಸಿದರು.
















