ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರವೀಂದ್ರ ಕಾಮತ್ ಅವರನ್ನು ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ಕೃಷ್ಣ ಕಾಂಚನ್ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ.
ಚುನಾವಣಾ ಪ್ರಕ್ರಿಯೆಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು, ನೂತನ ಉಪಾಧ್ಯಕ್ಷ ರವೀಂದ್ರ ಕಾಮತ್ ಅಭಿನಂದನೆ ಸಲ್ಲಿಸಿದರು.











