ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೊತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ (ದೂ.ಸಂಖ್ಯೆ: 08258-231101) ಹಾಗೂ ಕುಂದಾಪುರ (ದೂ.ಸಂಖ್ಯೆ: 08254-230370) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.











