Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ
    ಉಡುಪಿ ಜಿಲ್ಲೆ

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣಾಕಾಂಕ್ಷಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗಿದ್ದು, ಖಿನ್ನತೆಗೆ ಒಳಗಾದ ಸುಮಾರು 21 ಎಳೆ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರಂತಕರವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಯುವ ನ್ಯಾಯವಾದಿ ಕೋಳ್ಕೆರೆ ವಿಕಾಸ್ ಹೆಗ್ಡೆ ಹೇಳಿದ್ದಾರೆ.

    Click Here

    Call us

    Click Here

    ಈ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಸರ್ಕಾರ ಪೊಲೀಸ್ ಲಾಠಿಚಾರ್ಜ್ ನಡೆಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿತು. ಈ ವೇಳೆ ಹಲವರು ಗಾಯಗೊಂಡರೆ, ಕೆಲವರು ಮೂಳೆ ಮುರಿತ ಸೇರಿದಂತೆ ಗಂಭೀರ ಗಾಯಗಳಿಗೆ ಒಳಗಾದರು. ದೇಶವ್ಯಾಪಿ ವಿದ್ಯಾರ್ಥಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಬೇಕಾಯಿತು ಎಂದು ಹೇಳಿದ್ದಾರೆ.

    ಆದರೆ, ಉಡುಪಿ ಸೇರಿದಂತೆ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಹಾಗೂ ಅದರಲ್ಲಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಭಾಗವಹಿಸುತ್ತಿರುವುದು ಆಶ್ಚರ್ಯಕರವಾಗಿದೆ. ಬಿಜೆಪಿಯ ನಡೆ ನೋಡಿದರೆ, ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಅವರಿಗೆ ಬೆಂಬಲ ನೀಡಿದ ಕಾಂಗ್ರೆಸ್ ತಪ್ಪು ಎಂಬ ಸಂದೇಶ ನೀಡಲು ಪ್ರಯತ್ನಿಸುತ್ತಿರುವಂತಿದೆ ಎಂದು ಅವರು ಆರೋಪಿಸಿದ್ದಾರೆ.

    ಬಿಜೆಪಿಯ ಪ್ರಕಾರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಈ ಹಗರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿರುವುದು ಸುಳ್ಳೇ? ಆತ್ಮಹತ್ಯೆಗೆ ಶರಣಾದ ಎಳೆಮಕ್ಕಳ ಸಾವಿಗೆ ಬಿಜೆಪಿ ನಾಯಕರು ಯಾವ ನೈತಿಕ ಉತ್ತರ ನೀಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

    ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ. ನಾನೊಬ್ಬ ಕಾನೂನು ವಿದ್ಯಾರ್ಥಿಯಾಗಿ ಕೇಳುತ್ತಿರುವ ಪ್ರಶ್ನೆಯೆಂದರೆ, ನಿಮ್ಮ ಆಡಳಿತದಲ್ಲಿ ಜಾರಿಯಲ್ಲಿರುವುದು ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವೇ, ಅಥವಾ ಬಿಜೆಪಿಯದೇ ಪ್ರತ್ಯೇಕ ಸಂವಿಧಾನವೇ? ಇದನ್ನು ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಯುವ ನ್ಯಾಯವಾದಿ ಕೋಳ್ಕೆರೆ ವಿಕಾಸ್ ಹೆಗ್ಡೆ ಪ್ರಶ್ನಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ನಾಗರಿಕರು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ನಡೆಸುಂತಾಗಲಿ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    11/09/2026

    ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ: ಸಚಿವ ರಿಜ್ವಾನ್ ಅರ್ಷದ್

    10/09/2026

    ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ

    09/09/2026
    Leave A Reply Cancel Reply

    one × one =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    • ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    • ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    • ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.