ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿಯ ಸೆಂಟ್ ಸಿಸಿಲಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ನಡೆದ ಎಐಸಿಎಸ್ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 17 ವರ್ಷದೊಳಗಿನ ವಿದ್ಯಾರ್ಥಿಗಳಾದ ಶಶಿಧರ ಆರ್. ಹೆಚ್., ಕಾಲೇಶ್ವರ, ಸುಜಿತ್ ಸಿ. ಎನ್., ಮಹೇಶ್ ಎ. ಪಾಟೀಲ್ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಯ ಪ್ರಾಂಶುಪಾಲರು ಮತ್ತು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಆದ ಶರಣ ಕುಮಾರ ಈ ಯಶಸ್ಸಿಗೆ ಕಾರಣರಾದ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು ಹಾಗೂ ತರಬೇತುದಾರರ ಶ್ರಮವನ್ನು ಅಭಿನಂದಿಸಿದರು.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ತರಬೇತುದಾರರು ಹರ್ಷ ವ್ಯಕ್ತಪಡಿಸಿದ್ದಾರೆ.











