ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಓಂ ಶ್ರೀ ಮಂಜುನಾಥಾಯ ನಮಃ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ರಿ. ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಹಾಗೂ ಪೆರ್ಡೂರು ಪ್ರೌಢಶಾಲೆ, ಪೆರ್ಡೂರು ಇವರ ಜಂಟಿ ಆಶ್ರಯದಲ್ಲಿ ಬುಧವಾರದಂದು ಪೆರ್ಡೂರು ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ್ ಶೆಟ್ಟಿ ಕುತ್ಯಾರು ಬೀಡು ಅವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರ್ಡೂರು ಪ್ರೌಢಶಾಲೆಯ ಶಿಕ್ಷಕ ಹಸೀನ ಬಾನು ಅವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಡುಪಿ ಎಸ್.ಪಿ. ಕಚೇರಿಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರು ವಿದ್ಯಾರ್ಥಿ ಜೀವನದಲ್ಲಿ ದಾರಿ ತಪ್ಪುವ ಕಾರಣಗಳು ಮತ್ತು ಪರಿಣಾಮಗಳ ಬಗ್ಗೆ ತಿಳಿಸಿ ದರು. ಯಾವ ರೀತಿ ಯುವ ಜನತೆ ಎಚ್ಚೆತ್ತುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬಹುದು ಎಂಬ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಡ್ರಗ್ ಮಾದಕ ವಸ್ತುಗಳ ಸೇವನೆಯಿಂದ ಅಪರಾಧಗಳು ನಡೆಯುತ್ತಿದ್ದು, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ಜೀವನದಲ್ಲಿ, ದೃಢ ನಿರ್ಧಾರ, ಉತ್ತಮ ಚಿಂತನೆಗಳ ಮೂಲಕ ಸುಧಾರಣೆ ಸಾಧ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಫಿ ತೋಟಒಕ್ಕೂಟದ ಅಧ್ಯಕ್ಷೆ ಲಲಿತಾ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಲಯದ ಮೇಲ್ವಿಚಾರಕರಾದ ಮನೋರಮ ನಿರೂಪಿಸಿದರು. ಸೇವಾಪ್ರತಿನಿಧಿ ಅಶೋಕ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋಧ ಧನ್ಯವಾದ ಕಾರ್ಯಕ್ರಮ ನಡೆಸಿಕೊಟ್ಟರು.
















