ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ವಿರುದ್ಧ ನಿಂದನಾತ್ಮಕ ಪದ ಬಳಸಿ, ಸಾರ್ವಜನಿಕರಲ್ಲಿ ದ್ವೇಷ ಹಾಗೂ ಅಭದ್ರತೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೋಟ ಬ್ಲಾಕ್ ಕಾಂಗ್ರೆಸ್ ಕೋಟ ಆರಕ್ಷಕ ಠಾಣೆಗೆ ದೂರು ನೀಡಿತು.
ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಕೋಟ ಪೊಲೀಸ್ ಎ.ಎಸ್‌ಐ ಗೋಪಾಲ್ ಪೂಜಾರಿ ಅವರಿಗೆ ದೂರಿನ ಪ್ರತಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಶಾಸಕರ ಭಾಷಣದ ವಿಡಿಯೋ ತುಣುಕುಗಳನ್ನು ಆಧರಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಗೋಪಾಲ್ ಬಂಗೇರ, ರಮೇಶ್ ಮೆಂಡನ್ ಇದ್ದರು.











