ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 121ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು.

ನಿವೃತ್ತ ಅಧ್ಯಾಪಕ ಸುಬ್ರಾಯ ಮಯ್ಯ, ಪ್ರಸಂಗಕರ್ತ ಡಾ. ಶಿವಕುಮಾರ ಅಳಗೋಡು, ಶಿಕ್ಷಕಿ ಹಾಗೂ ಯಕ್ಷಗಾನ ಕಲಾವಿದೆ ನಾಗರತ್ನ ಹೇರ್ಳೆ ಗಿಳಿಯಾರು, ಉಪ್ಪಿನಕುದ್ರು ಗೊಂಬೆಯಾಟದ ಅರ್ಥಧಾರಿ ರಾಮ ಬಳೆಗಾರ್ ಹೆರೂರು, ತಲ್ಲೂರು ನಾರಾಯಣ ವಿಕಲ ಚೇತನ ಶಾಲೆಯ ಮುಖ್ಯಸ್ಥ ತಲ್ಲೂರು ಸುರೇಶ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಕಾಡೆಮಿಯ ವತಿಯಿಂದ ನಾಗರತ್ನ ಹೇರ್ಳೆ ಅವರನ್ನು ಸಮ್ಮಾನಿಸಲಾಯಿತು. ಚಂದ್ರ ದೇವಾಡಿಗ ಉಪ್ಪಿನಕುದ್ರು ಅವರಿಗೆ ಅಕಾಡೆಮಿಯ ವತಿಯಿಂದ ವೈದ್ಯಕೀಯ ನೆರವು ನೀಡಲಾಯಿತು. ಕಾರ್ಯಕ್ರಮದ ಕೊನೆಗೆ ಜಾಬಾಲಿ ನಂದಿನಿ ಯಕ್ಷಗಾನ ತಾಳಮದ್ದಲೆ ನೆರೆದ ಪ್ರೇಕ್ಷಕರನ್ನು ರಂಜಿಸಿದರು.
ದೇವಕಿ ಸುರೇಶ್ ಪ್ರಭು ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು. ರಾಜೇಂದ್ರ ಪೈ ವಂದಿಸಿದರು.
















