Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‌ಐಆರ್‌ ಕಾರ್ಯವು ಜಿಲ್ಲೆಯಲ್ಲಿ ಶೇ.92.83ರಷ್ಟು ಡಿಜಿಟಲೀಕರ ಪ್ರಕ್ರಿಯೆ ಪೂರ್ಣ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಎಸ್‌ಐಆರ್‌ ಕಾರ್ಯವು ಜಿಲ್ಲೆಯಲ್ಲಿ ಶೇ.92.83ರಷ್ಟು ಡಿಜಿಟಲೀಕರ ಪ್ರಕ್ರಿಯೆ ಪೂರ್ಣ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಸಮರ್ಪಕವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯ ಒಟ್ಟು 10,63,876 ಮತದಾರರಲ್ಲಿ ಒಟ್ಟು 9,87587 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ.92.83ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

    Click Here

    Call us

    Click Here

    ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷದ ವತಿಯಿಂದ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಯಾರೊಬ್ಬ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿ ಕೊಳ್ಳಬೇಕು. ಇದಕ್ಕೆ ರಾಜಕೀಯ ಪಕ್ಷಗಳು, ಬಿಎಲ್‌ಓಗಳು, ಬಿಎಲ್‌ಎಗಳು, ಪರಿಷ್ಕರಣೆ ಕಾರ್ಯದಲ್ಲಿ ಕೈಜೋಡಿಸುವುದರೊಂದಿಗೆ ಪೂರ್ಣ ಪ್ರಮಾಣ ದಲ್ಲಿ ಮತದಾರರ ಕರಡು ಪಟ್ಟಿ ತಯಾರಿಸಲು ಸಹಕಾರ ನೀಡಬೇಕು ಎಂದರು.

    ಜಿಲ್ಲೆಯಲ್ಲಿ ಒಟ್ಟು 1112 ಮತಗಟ್ಟೆಗಳಿದ್ದು, ಅವುಗಳಲ್ಲಿ 733 ಮತಗಟ್ಟೆಗಳಲ್ಲಿ ಶೇ.100ರಷ್ಟು ಡಿಜಿಟಲಿಕರಣ ಪ್ರಕ್ರಿಯೆ ಪೂರ್ಣಗೋಳಿಸಿದ್ದು, ಇವುಗಳಲ್ಲಿ 562 ಮತಗಟ್ಟೆಗಳಲ್ಲಿ ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಂಡಿದ್ದು, 171 ಮತಗಟ್ಟೆಗಳಲ್ಲಿ ಅಲ್ಪಪ್ರಮಾಣದ ವೆರಿಫಿಕೇಷನ್‌ಗೆ ಬಾಕಿ ಇದೆ. ಇದು ತ್ವರಿತಗತಿಯಲ್ಲಿ ಆಗಬೇಕಿದೆ ಎಂದು ಅವರು ತಿಳಿಸಿದರು.

    ಜಿಲ್ಲೆಯಲ್ಲಿ 19,840 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿದೆ. 24,679 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 7521 ಮತದಾರರು ತಮ್ಮ ದಾಖಲಾತಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಬಿಎಲ್‌ಓಗಳು ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪೂರ್ವದಲ್ಲಿ ಮುದ್ರಣಗೊಂಡಿರುವ ನಮೂನೆಯನ್ನು ದ್ವಿ ಪ್ರತಿಯಲ್ಲಿ ವಿತರಿಸಿದ್ದು, ಇವುಗಳ ಡಿಜಿಟಲೀಕರಣ ಕಾರ್ಯವು ಮುಕ್ತಾಯದ ಹಂತದಲ್ಲಿದೆ. ಆದಷ್ಟು ಶೀಘ್ರದಲ್ಲಿ ಮುಗಿಸಿದಲ್ಲಿ ರಾಜಕೀಯ ಪಕ್ಷದವರಿಗೆ ವಿತರಿಸಲು ಅನುಕೂಲಕರವಾಗಲಿದೆ ಎಂದರು.

    Click here

    Click here

    Click here

    Call us

    Call us

    ರಾಜಕೀಯ ಪಕ್ಷಗಳ ಮುಖಂಡರುಗಳು ಮಾತನಾಡಿ, ಎಸ್‌ಐಆರ್ ಕಾರ್ಯದಲ್ಲಿ ಸರಕಾರಿ ನೌಕರರು, ಅಂಗನ ವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಬಿಎಲ್‌ಎಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವುದ ರೊಂದಿಗೆ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾವು ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತಿದ್ದೇವೆ. ಪ್ರಸ್ತುತ ಡಿಜಿಟಲೀಕರಣ ಪೂರ್ಣ ಗೊಂಡಿರುವ ಹಿನ್ನೆಲೆ ಕರಡು ಮತದಾರರ ಪಟ್ಟಿ ತಯಾರಿಸಿ ಘೋಷಣೆಗೂ ಮುನ್ನ ಮತದಾರರ ಪಟ್ಟಿ ನೀಡಿದಲ್ಲಿ ಕೆಲವು ನ್ಯೂನ್ಯತೆಗಳನ್ನು ಸರಿಪಡಿಸಲು ಅನುಕೂಲವಾಗಲಿದೆ ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳಾದ ಕಾಂಗ್ರೆಸ್‌ನ ಕೆ.ಗೋಪಾಲ ಪೂಜಾರಿ, ಅಬೀಬ್ ಅಲಿ, ಅಶೋಕ್, ಬಿ.ವಿಜಯ, ಬಿಜೆಪಿಯ ಚಂದ್ರಶೇಖರ ಪ್ರಭು, ಶ್ರೀಕಾಂತ್ ನಾಯಕ್, ಜೆಡಿಎಸ್‌ನ ಜಯರಾಮ್ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಡಪದ ಅಪ್ಪಣ್ಣ ಅವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

    30/07/2026

    ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಉಡುಪಿ ಜಿಲ್ಲಾ ಯುವ ವಿಭಾಗದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆ

    30/07/2026

    ಯುವಜನತೆಯಲ್ಲಿ ಸಾಮಾಜಿಕ ಹೊಣೆಗಾರಿಕೆಗಾಗಿ ಭಾರತ್‌ ಜೋಡೋ ಯುವ ಸಂಘಗಳ ಸ್ಥಾಪನೆ: ಪ್ರತೀಕ್ ಬಾಯಲ್

    29/07/2026
    Leave A Reply Cancel Reply

    two × four =

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಐಆರ್‌ ಕಾರ್ಯವು ಜಿಲ್ಲೆಯಲ್ಲಿ ಶೇ.92.83ರಷ್ಟು ಡಿಜಿಟಲೀಕರ ಪ್ರಕ್ರಿಯೆ ಪೂರ್ಣ: ಜಿಲ್ಲಾಧಿಕಾರಿ
    • ಬೈಂದೂರು ಗೋಳಿಹೊಳೆಯಲ್ಲಿ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ – ಧಾರ್ಮಿಕ ಕಾರ್ಯಗಳಿಗೆ ಚಾಲನೆ
    • ನವದೆಹಲಿಯಲ್ಲಿ ಪೇಜಾವರ ಶ್ರೀಗಳ 39ನೇ ಚಾತುರ್ಮಾಸ್ಯ ವ್ರತ ಸಂಕಲ್ಪ – ಶ್ರೀಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ಆರ್‌
    • ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ ಅವರಿಗೆ ʼಅಕ್ಷರ ಪದ್ಮ ನಿಧಿʼ ಬಿರುದು ಪ್ರದಾನ
    • ‘ಮೌಲ್ಯ-ಸಾಮರ್ಥ್ಯದ ಸಂಗಮ, ಸಮುದಾಯಗಳ ಸಹಭಾಗಿತ್ವ’: ವಿವೇಕ್ ಆಳ್ವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.