Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಪಾವತಿ ಅವಧಿ ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಸಂಸದ ಬಿ.ವೈ. ಆರ್‌ ಒತ್ತಾಯ
    ಊರ್ಮನೆ ಸಮಾಚಾರ

    ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಪಾವತಿ ಅವಧಿ ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಸಂಸದ ಬಿ.ವೈ. ಆರ್‌ ಒತ್ತಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನಾಧಾರಿತ ಬೆಳೆ ವಿಮೆ (WBCIS) ಯೋಜನೆಯ ಪ್ರೀಮಿಯಂ ಪಾವತಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕವನ್ನು ತಕ್ಷಣ ವಿಸ್ತರಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    Click Here

    Call us

    Click Here

    ರಾಜ್ಯದಲ್ಲಿ ಜುಲೈ ಅಂತ್ಯದ ವೇಳೆಗೆ ಸಾಮಾನ್ಯವಾಗಿ 249 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 165 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ದಾಖಲಾಗಿದೆ. ಮಳೆಯ ಅಭಾವದಿಂದ ಬಿತ್ತನೆ ಕಾರ್ಯ ವಿಳಂಬವಾಗಿದ್ದು, ಅನೇಕ ಕಡೆಗಳಲ್ಲಿ ಬೆಳೆಗಳು ಸಮರ್ಪಕವಾಗಿ ಬೆಳೆಯದೇ ರೈತರು ಆತಂಕಕ್ಕೆ ಒಳಗಾಗಿದ್ದಾರೆ.  ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಶೇ.44 ರಷ್ಟು ಮಳೆ ಕೊರತೆ ದಾಖಲಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

    2026–27ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳು ಮೆಣಸು, ಶುಂಠಿ ಹಾಗೂ ಮಾವು ಬೆಳೆಗಳಿಗೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ರೈತರಿಗೆ ನಿಗದಿತ ಅವಧಿಯೊಳಗೆ ಪ್ರೀಮಿಯಂ ಪಾವತಿಸುವುದು ಕಷ್ಟಕರವಾಗಿದೆ ಎಂದು ಸಂಸದರು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಮಳೆಮಾಪನ ಕೇಂದ್ರಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಂಸದರು ಎರಡು ಬಾರಿ ಅಧಿಕಾರಿಗಳ ಸಭೆ ನಡೆಸಿದ್ದರು.  ಜಿಲ್ಲೆಯ 280 ಮಳೆಮಾಪನ ಯಂತ್ರಗಳಲ್ಲಿ ಕೇವಲ 112 ಯಂತ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಪರಿಣಾಮ ಈಗಾಗಲೇ 205 ಯಂತ್ರಗಳು ಪುನಃ ಕಾರ್ಯನಿರ್ವಹಿಸುತ್ತಿವೆ.  ಉಳಿದ 75 ಯಂತ್ರಗಳಲ್ಲಿ 34 ಯಂತ್ರಗಳನ್ನು ಹೊಸದಾಗಿ ಅಳವಡಿಸಲಾಗುತ್ತಿದ್ದು, ಉಳಿದ 41 ಯಂತ್ರಗಳನ್ನು ಆಗಸ್ಟ್ 5ರೊಳಗೆ ದುರಸ್ತಿಪಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಸೂಚಿಸಿದ್ದಾರೆ.

    ಈ ಹಿಂದೆ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಬೆಳೆ ವಿಮೆ ನೋಂದಣಿಗೆ ಅವಕಾಶವಿದ್ದರೂ,  ಈ ಬಾರಿ ರೈತರು ಸಾಲ ಪಡೆದಿರುವ ಬ್ಯಾಂಕ್ ಅಥವಾ ಸಹಕಾರ ಸಂಘಗಳಲ್ಲಿಯೇ ಪ್ರೀಮಿಯಂ ಪಾವತಿಸಬೇಕಾದ ಕಾರಣ ಬ್ಯಾಂಕ್‌ಗಳಲ್ಲಿ ಒತ್ತಡ ಹೆಚ್ಚಾಗಿದೆ.  ಸರ್ವರ್ ಸಮಸ್ಯೆ ಹಾಗೂ ತಾಂತ್ರಿಕ ಅಡಚಣೆಗಳಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

    Click here

    Click here

    Click here

    Call us

    Call us

    ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ಪ್ರೀಮಿಯಂ ಪಾವತಿ ದಿನಾಂಕವನ್ನು ಕನಿಷ್ಠ ಕೆಲವು ವಾರಗಳವರೆಗೆ ವಿಸ್ತರಿಸಿ, ಯಾವುದೇ ರೈತ ವಿಮಾ ಸೌಲಭ್ಯದಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ಆಗ್ರಹಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರರ ʼಮಾರ ಮಿಂದನುʼಕಥಾ ಸಂಕಲನ ಆಯ್ಕೆ

    30/07/2026

    ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್

    30/07/2026

    ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

    30/07/2026
    Leave A Reply Cancel Reply

    twelve + fifteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರರ ʼಮಾರ ಮಿಂದನುʼಕಥಾ ಸಂಕಲನ ಆಯ್ಕೆ
    • ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್
    • ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ
    • ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ಲಾಸ್ಯ ಮಧ್ಯಸ್ಥ ಜಿಲ್ಲಾ ಮಟ್ಟಕ್ಕೆ ಆಯ್ಕೆ 
    • ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಪಾವತಿ ಅವಧಿ ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಸಂಸದ ಬಿ.ವೈ. ಆರ್‌ ಒತ್ತಾಯ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.