Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ
    ಊರ್ಮನೆ ಸಮಾಚಾರ

    ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

    Updated:30/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೂರು ವರ್ಷಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಕೂರು ಎಂಬಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ತಲೆಯ ಮೇಲೆ ಹಾಕಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಕುಂದಾಪುರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ಆದೇಶ ನೀಡಿದ್ದಾರೆ.

    Click Here

    Call us

    Click Here

    ರಾಜು ಶಿಕ್ಷೆಗೆ ಗುರಿಯಾದ ಆರೋಪಿ. 2023ರ ಮೇ.14ರಂದು ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ನಾಗರಾಜ ಆಚಾರಿ ಗಾರೆ ಕೆಲಸಕ್ಕಾಗಿ ಸಂಗೋದಪ್ಪ ಯಾನೆ ಸಂಗಮೇಶ ಎಂಬ ಮೇಸ್ತ್ರಿಯ ಮೂಲಕ ರಾಜು ಅವರನ್ನು ಕರೆದುಕೊಂಡು ಹೋಗಿದ್ದರು. ರಾತ್ರಿ 9:15 ಗಂಟೆಗೆ ಸಂಗೊದೆಪ್ಪ ಹಾಗೂ ರಾಜು ಸಂಬಳದ ವಿಚಾರ ವಾಗಿ ಗಲಾಟೆ ಮಾಡಿ ಹೊಡೆದಾಡಿಕೊಂಡಿದ್ದು, ಅದರಲ್ಲಿ ರಾಜು ಎಂಬಾತನು ಪಂಚಾಂಗದ ಬಳಿಯಲ್ಲೇ ಇದ್ದ ಕೆಂಪು ಕಲ್ಲನ್ನು ಎತ್ತಿ ಸಂಗೋದಪ್ಪ ಅವರ ತಲೆಯ ಮೇಲೆ ಹಾಕಿ ಕೊಲೆ ಮಾಡಿರುವುದಾಗಿ ದೂರಲಾಗಿತ್ತು.

    ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ಸಾಕ್ಷಿ ವಿಚಾರಣೆಯನ್ನು ಸರಕಾರದ ಪರವಾಗಿ ಅಭಿಯೋಜಕಿ ಇಂದಿರಾ ನಾಯ್ಕ ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

    ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ ಶೇಖ್ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು, ಆತನಿಗೆ ಕಲಂ: 302 ಐಪಿಸಿಯಡಿ ಜೀವಾವಧಿ ಶಿಕ್ಷೆ ಮತ್ತು 5,000 ರೂ. ದಂಡ, ಕಲಂ 504 ಐಪಿಸಿಯಡಿ ಒಂದು ವರ್ಷ ಜೈಲು ಶಿಕ್ಷೆ, 5,000ರೂ. ದಂಡ, ಕಲಂ 506 ಐಪಿಸಿರಡಿ 1 ವರ್ಷ ಸಜೆ, 5,000ರೂ. ದಂಡ ಹಾಗೂ ಕಲಂ 324 ಐಪಿಸಿ ರಡಿ 1 ವರ್ಷ ಸಜೆ ರೂ 5,000 ದಂಡವನ್ನು ವಿಧಿಸಿ ಆದೇಶ ನೀಡಿದ್ದಾರೆ.

    ಸದ್ರಿ ಪ್ರಕರಣದಲ್ಲಿ ಕೋರ್ಟ ಮಾನಿಟರಿಂಗ್ ಅಧಿಕಾರಿಯಾಗಿ ಸಿಪಿಐ ಸವಿತೃತೇಜ್‌, ಈಗಿನ ಬೈಂದೂರು ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪವನ್ ನಾಯಕ್ ಹಾಗೂ ನ್ಯಾಯಾಲಯ ಸಿಬ್ಬಂದಿ ರೇಖಾ ಮಪಿಸಿ 2009 ನೇ ರವರು ಸಾಕ್ಷಿದಾರರನ್ನು ಮಾನ್ಯ ನ್ಯಾಯಾಲಯಕ್ಕೆ ಸಮಯಕ್ಕೆ ಸರಿಯಾಗಿ ಹಾಜರುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ

    23/09/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು

    23/09/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ

    23/09/2026
    Leave A Reply Cancel Reply

    10 − three =

    Call us

    Click Here

    Call us

    Call us

    Call us
    Highest Viewed Recently
    • ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ
    • ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ
    • ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ಕಾಲೇಜು ಸ್ಕೌಟ್ಸ್-ಗೈಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.