Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ

    Updated:31/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ನಗರದ ಚರ್ಚ್ ರಸ್ತೆಯಲ್ಲಿ ವ್ಯಕ್ತಿಯೊರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬಾರ್ಕೂರು ಕಳ್ಳೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದ ವ್ಯಕ್ತಿ.

    Click Here

    Call us

    Click Here

    ಕುಂದಾಪುರಕ್ಕೆ ಎರಡನೇ ಪತ್ನಿಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಶುಕ್ರವಾರ ಬೆಳಗಿನ ಜಾವ 03:30ರ ಸುಮಾರಿಗೆ ಈ ಘಟನೆ ನಡೆದಿದೆ. ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.

    ಆಗಿದ್ದೇನು?
    ಗುರುವಾರ ರಾತ್ರಿ  ರಾತ್ರಿ 11:45ರ ಸುಮಾರಿಗೆ ಆರೋಪಿ ಡೆರಿಕ್‌ನು, ಐವನ್‌ ಅವರಿಗೆ ಕರೆ ಮಾಡಿ ಚಟ್ಲಿ ಕೊಡುವ ವಿಚಾರದಲ್ಲಿ ಹಣ ಬರಲು ಬಾಕಿ ಇದ್ದು, ಈ ವಿಚಾರದಲ್ಲಿ ಡೆರಿಕ್‌ ನು ಮದ್ಯಸ್ಥಿಕೆ ವಹಿಸಿ ಹಣ ತೆಗಿಸಿ ಕೊಡುತ್ತೇನೆ ಎಂದು ಹೇಳಿದ್ದ. ವಿಚಾರದಲ್ಲಿ ಪೋನ್‌ನಲ್ಲಿ  ಗಲಾಟೆ ಮಾಡಿಕೊಳ್ಳುತ್ತಿದ್ದು, ಆ ಸಮಯ  ಡೆರಿಕ್‌ ನು ಐವನ್‌ ರವರಿಗೆ ದಮ್‌ ಇದ್ದರೆ ಒಬ್ಬನೇ ಕುಂದಾಪುರಕ್ಕೆ ಬಾ ಎಂದು ಸವಾಲು ಹಾಕಿದ್ದ.  ರಾತ್ರಿ 01:30ಕ್ಕೆ ಐವನ್‌ರ ಪೋನಗೆ  ಲೋಕೆಶನ್‌ ಕಳುಹಿಸಿದ್ದ. ಅದರಂತೆ ಕುಂದಾಪುರದ ಚರ್ಚ್‌ ರಸ್ತೆಯ ಹೋಲಿ ರೋಸಾರಿಯ ಚರ್ಚಿನ ಎದುರು ಇರುವ ಕಾಂಕ್ರೇಟ್‌ ರಸ್ತೆಯಲ್ಲಿ ಐವನ್‌  ಕಾರನ್ನು ನಿಲ್ಲಿಸಿಕೊಂಡಿದ್ದಾಗ,  ಸುಮಾರು 03:15ಕ್ಕೆ ಥಾರ್‌ ಕಾರಿನಲ್ಲಿ ಬಂದ ಡೆರಿಕ್‌, ತಾನು ತಂದಿದ್ದ ಒಂದು ಗನ್‌ ನಿಂದ ಐವನ್‌ಗೆ ಸೊಂಟದ ಕೆಳ ಭಾಗಕ್ಕೆ ಶೂಟ್‌ ಮಾಡಿ ತನ್ನ ಕಾರಿನಲ್ಲಿಪರಾರಿಯಾಗಿದ್ದಾನೆ.

    ಸೊಂಟ ಹಾಗೂ ಕಾಲಿನ ಭಾಗಕ್ಕೆ ಗಾಯಗೊಂಡು ರಕ್ತಸ್ರಾವ ಆಗಿ ರಸ್ತೆಯಲ್ಲೆ ಐವನ್‌ ಸ್ಥಳದಲ್ಲೆ ಮೃತಪಟ್ಟಿರುತ್ತಾರೆ. ಈ ಗಲಾಟೆಗೆ ಐವನ್‌ ರವರಿಗೆ ಹಾಗೂ ಡೆರಿಕ್‌ ರವರಿಗೆ ಇದ್ದ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರದ ವಿಚಾರದಲ್ಲಿ ಇರುವ ಮನಸ್ತಾಪದಿಂದ ಆಗಿರುತ್ತದೆ. 

    ಹಣಕಾಸಿನ ವ್ಯವಹಾರ ಮಾಡಿಕೊಂಡಿದ್ದ ಐವನ್ ಅವರು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

    Click here

    Click here

    Click here

    Call us

    Call us

    ಉಡುಪಿ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟ‌ರ್ ಜಯರಾಮ ಗೌಡ, ಪಿಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಭೇಟಿ ನೀಡಿದ್ದಾರೆ.

    ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಡೆರಿಕ್‌ ಕ್ರಾಸ್ತಾ ಪತ್ತೆ ಬಗ್ಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್.ವಿ. ಪ.ಪೂ ಕಾಲೇಜಿನ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    01/08/2026

    ಕೋಡಿ ಶಾಲೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಿಜಯ ನಾಯರಿಗೆ ಸನ್ಮಾನ

    01/08/2026

    ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

    01/08/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್.ವಿ. ಪ.ಪೂ ಕಾಲೇಜಿನ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಕೋಡಿ ಶಾಲೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಿಜಯ ನಾಯರಿಗೆ ಸನ್ಮಾನ
    • ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
    • ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
    • ಉಡುಪಿ: ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.