ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಆಗಸ್ಟ್ 31 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.











