Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

    Updated:01/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕೃಷಿ ಇಲಾಖೆಯ ಆತ್ಮಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿರುತ್ತದೆ.

    Click Here

    Call us

    Click Here

    ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ ಒಟ್ಟಾರೆ 10 ಮಂದಿ ರೈತರಿಗೆ (ತಲಾ ರೂ. 25,000/-) ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲ್ಲೂಕಿನ ಒಟ್ಟಾರೆ ೫ ಮಂದಿ ರೈತರಿಗೆ (ತಲಾ ರೂ. 10,000/-) ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು.

    ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ೩೧.೦೮.೨೦೨೬ ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಪ್ರಶಸ್ತಿಯ ಆಯ್ಕೆಗೆ ಸಂಬಂಧಿಸಿದ ಷರತ್ತುಗಳು:

    • ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳಿಂದ ಈಗಾಗಲೇ ಸಮಾನಾಂತರವಾದ ಪ್ರಶಸ್ತಿಗಳನ್ನು ಪಡೆದಲ್ಲಿ ಅಂತಹ ರೈತರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
    • ರೈತರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು.
    • ಅರ್ಜಿ ಸಲ್ಲಿಸುವ ರೈತರು ಸ್ವಂತ ಜಮೀನು ಹೊಂದಿದ್ದು, ಕನಿಷ್ಟ 1 ಎಕ್ರೆ ವಿಸ್ತೀರ್ಣ ಹೊಂದಿರಬೇಕು.
    • ಜಿಲ್ಲಾ ಮಟ್ಟದಲ್ಲಿ 10 ಹಾಗೂ ತಾಲ್ಲೂಕು ಮಟ್ಟದಲ್ಲಿ 5 ಪ್ರಶಸ್ತಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಿರ್ಣಯದಂತೆ ನೀಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.
    • ಸ್ವೀಕರಿಸಿದ ಅರ್ಜಿಗಳನ್ನು ಕ್ಷೇತ್ರ ಪರಿಶೀಲನಾ ತಂಡವು ಪರಿಶೀಲಿಸಿ ಸರಾಸರಿ ಅಂಕದ ಜೊತೆಯ ಆಧಾರದ ಮೇಲೆ ರೈತರನ್ನು ಪ್ರಶಸ್ತಿಯ ಆಯ್ಕೆಗೆ ಪರಿಗಣಿಸಲಾಗುವುದು.
    • ಸಾವಯವ ಕೃಷಿಯನ್ನು ಅಳವಡಿಸಿಕೊಂಡಿರುವ ರೈತರು ಚಾಲ್ತಿಯಲ್ಲಿರುವ ವೈಯಕ್ತಿಕ ಸಾವಯವ ಪ್ರಮಾಣೀಕರಣ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸುವುದು.

    ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಅರ್ಜಿ ಆಹ್ವಾನ

    01/08/2026

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

    31/07/2026

    ಎಸ್‌ಐಆರ್‌ ಕಾರ್ಯವು ಜಿಲ್ಲೆಯಲ್ಲಿ ಶೇ.92.83ರಷ್ಟು ಡಿಜಿಟಲೀಕರ ಪ್ರಕ್ರಿಯೆ ಪೂರ್ಣ: ಜಿಲ್ಲಾಧಿಕಾರಿ

    30/07/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್.ವಿ. ಪ.ಪೂ ಕಾಲೇಜಿನ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಕೋಡಿ ಶಾಲೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಿಜಯ ನಾಯರಿಗೆ ಸನ್ಮಾನ
    • ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
    • ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
    • ಉಡುಪಿ: ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.